ಬೆಂಗಳೂರು: ರಾಜ್ಯ ಸೀನಿಯರ್ ಮತ್ತು ಜೂನಿಯರ್ ಅಥ್ಲೆಟಿಕ್ ಕೂಟ ಮೇ 7 ಮತ್ತು 8ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುರುಷ ಮತ್ತು ಮಹಿಳಾ ವಿಭಾಗ, 20 ವರ್ಷದೊಳಗಿನ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.
ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ (ಕೆಎಎ) ಆಶ್ರಯದಲ್ಲಿ ನಡೆಯಲಿರುವ ಕೂಟದಲ್ಲಿ ಜೂನ್ ತಿಂಗಳಲ್ಲಿ ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರೀಯ ಚಾಂಪಿಯನ್‌ಷಿಪ್‌ಗೆ ಆಯ್ಕೆ ಕೂಡ ನಡೆಯಲಿದೆ. ಗರಿಷ್ಠ ಒಂದು ವಿಭಾಗದ ಎರಡು ಸ್ಪರ್ಧೆಗಳಲ್ಲಿ ಮಾತ್ರ ಪಾಲ್ಗೊಳ್ಳಲು ಅಥ್ಲೀಟ್‌ಗಳಿಗೆ ಅವಕಾಶವಿದೆ. ಆನ್‌ಲೈನ್ ಮೂಲಕ ಮೇ ಮೂರರ ಒಳಗೆ ಪ್ರವೇಶಪತ್ರಗಳನ್ನು ಕಳುಹಿಸಬೇಕು.
ಪಾಲ್ಗೊಳ್ಳುವವರು ಕೋವಿಡ್–ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕು. ಲಸಿಕೆ ಹಾಕಿಸಿಕೊಂಡವರು ಕೂಡ 72 ತಾಸುಗಳ ಒಳಗೆ ಪಡೆದಿರುವ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು. ಕೋವಿಡ್–19ರ ಹಿನ್ನೆಲೆಯಲ್ಲಿ ವಸತಿ ಸೌಲಭ್ಯ ಒದಗಿಸಲಾಗುವುದಿಲ್ಲ. ಮಾಹಿತಿಗೆ ಮಾಹಿತಿಗೆ ಕೆಎಎ ಕಾರ್ಯದರ್ಶಿ ಎ.ರಾಜವೇಲು (9448438276) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.