ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ರಾಷ್ಟ್ರಕ್ಕೆ ಕೀರ್ತಿ ತಂದಿರುವ ನಮ್ಮ ಒಲಿಂಪಿಯನ್‌ಗಳ ಬಗ್ಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದರು.
ಶನಿವಾರ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡು ತವರಿಗೆ ಮರಳಿರುವ ಭಾರತ ತಂಡದ ಸದಸ್ಯರಿಗೆ ಚಹಾಕೂಟ ಏರ್ಪಡಿಸಲಾಗಿತ್ತು.
ಇದೇ ವೇಳೆ ಮಾತನಾಡಿದ ಅವರು, ‘ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ನಾನು ಅಭಿನಂದಿಸುತ್ತೇನೆ. ಭಾರತದ ಕ್ರೀಡಾಪಟುಗಳು ಈ ಬಾರಿಯ ಕೂಟದಲ್ಲಿ ಏಳು ಪದಕಗಳನ್ನು ಗೆದ್ದಿದ್ದರು. ಇದು ಒಲಿಂಪಿಕ್ಸ್‌ನಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಕ್ರೀಡಾಪಟುಗಳ ಸಾಧನೆಗಳ ಬಗ್ಗೆ ಇಡೀ ದೇಶ ಹೆಮ್ಮೆಪಡುತ್ತದೆ’ ಎಂದರು.
ಚಹಾಕೂಟದಲ್ಲಿ ನೀರಜ್ ಚೋಪ್ರಾ, ಪಿ.ವಿ.ಸಿಂಧು, ಮೀರಾಬಾಯಿ ಚಾನು, ಲವ್ಲಿನಾ ಬೊರ್ಗೊಹೈನ್, ಪುರುಷರು ಮತ್ತು ಮಹಿಳಾ ಹಾಕಿ ತಂಡದ ಆಟಗಾರ್ತಿಯರು ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.