ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನ ಹಾಕಿಯಲ್ಲಿ ಭಾರತ ಪುರುಷ ಹಾಕಿ ತಂಡದ ಕಂಚಿನ ಪದಕ ಸಾಧನೆಯು ಎಲ್ಲ ಕ್ರಿಕೆಟ್ ವಿಶ್ವಕಪ್ ಗೆಲುವಿಗಿಂತಲೂ ಮಿಗಿಲಾದದ್ದು ಎಂದು ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
2007ರ ಟ್ವೆಂಟಿ-20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರೂ ಆಗಿರುವ ಗಂಭೀರ್ ಇಂತಹದೊಂದು ಹೇಳಿಕೆಯು ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ.
ಭಾರತ ಹಾಕಿ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸಿ ಟ್ವೀಟ್ ಮಾಡಿರುವ ಗಂಭೀರ್, '1983, 2007, 2011 ಕ್ರಿಕೆಟ್ ವಿಶ್ವಕಪ್ ಗೆಲುವುಗಳನ್ನು ಮರೆತೇ ಬಿಡಿ. ಯಾವುದೇ ವಿಶ್ವಕಪ್‌ಗಿಂತಲೂ ಹಾಕಿ ಮಿಗಿಲಾಗಿದದ್ದು' ಎಂದು ಹೇಳಿದ್ದಾರೆ.
'ಭಾರತೀಯ ಹಾಕಿ ನನ್ನ ಹೆಮ್ಮೆ' ಎಂಬ ಹ್ಯಾಶ್‌ಟ್ಯಾಗ್ ಅನ್ನು ಗಂಭೀರ್ ಉಲ್ಲೇಖಿಸಿದ್ದಾರೆ.
ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಗೆಲುವು ದಾಖಲಿಸಿರುವ ಭಾರತ, ಕಂಚಿನ ಪದಕ ಗೆದ್ದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.