ಟೋಕಿಯೊ: ಭಾರತದ ಯುವ ಗಾಲ್ಫರ್ ಅದಿತಿ ಅಶೋಕ್, ಒಲಿಂಪಿಕ್ಸ್ ಗಾಲ್ಫ್ ಕ್ರೀಡೆಯಲ್ಲಿ ಐತಿಹಾಸಿಕ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದಾರೆ.
ಆರಂಭದ ಸುತ್ತಿನಿಂದಲೂ ಅಮೋಘ ಸಾಮರ್ಥ್ಯ ತೋರುತ್ತ ಮುನ್ನಡೆದ ಅದಿತಿಗೆ ಕೊನೆಯ ಸುತ್ತಿನಲ್ಲಿ ಆಘಾತ ಎದುರಾಗಿದೆ.
ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇನಲ್ಲಿ ಅಂತಿಮವಾಗಿ ನಾಲ್ಕನೇ ಸ್ಥಾನ ಗಳಿಸಿದ ಕನ್ನಡತಿ ಅದಿತಿ, ಸ್ವಲ್ಪದರಲ್ಲೇ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದಾರೆ.
ಮೊದಲ ಮೂರು ಸುತ್ತಿನ ಅಂತ್ಯಕ್ಕೆ ಪದಕ ಬೇಟೆಯಲ್ಲಿದ್ದ ಅದಿತಿ, ಶನಿವಾರ ನಡೆದ ನಾಲ್ಕನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರು. ಇದರಿಂದಾಗಿ ಎರಡನೇ ಸ್ಥಾನದಲ್ಲಿದ್ದ ಅದಿತಿ ನಾಲ್ಕನೇ ಸ್ಥಾನಕ್ಕೆ ಕುಸಿದರು.
ಹಾಗಿದ್ದರೂ 23 ವರ್ಷದ ಬೆಂಗಳೂರು ಮೂಲದ ಅದಿತಿ, ಒಲಿಂಪಿಕ್ಸ್ ಗಾಲ್ಫ್ ಇತಿಹಾಸದಲ್ಲೇ ಭಾರತದ ಪರ ಶ್ರೇಷ್ಠ ಸಾಧನೆ ಮಾಡಿದ ಹಿರಿಮೆಗೆ ಪಾತ್ರರಾಗಿದ್ದಾರೆ.
2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಅದಿತಿ 41ನೇ ಸ್ಥಾನ ಗಳಿಸಿದ್ದರು. ಈಗ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.