ಚಂಡೀಗಡ: ಒಲಿಂಪಿಕ್ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾಗೆ ಹರಿಯಾಣ ಸರ್ಕಾರ ₹6 ಕೋಟಿ ಬಹುಮಾನ ಘೋಷಿಸಿದೆ.
ಚೋಪ್ರಾ ಅವರಿಗೆ ನಗದು ಬಹುಮಾನ ಮತ್ತು ಉನ್ನತ ದರ್ಜೆಯ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಘೋಷಿಸಿದ್ದಾರೆ.
ರಾಜ್ಯದ ಪಂಚಕುಲದಲ್ಲಿ ತಲೆ ಎತ್ತಲಿರುವ ಅಥ್ಲೆಟಿಕ್ಸ್ ಕೇಂದ್ರಕ್ಕೆ ಚೋಪ್ರಾ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗುವುದು. ರಾಜ್ಯದ ನೀರಜ್ ಚೋಪ್ರಾ, ರವಿ ದಹಿಯಾ ಮತ್ತು ಬಜರಂಗ್ ಪೂನಿಯಾ ಅವರನ್ನು ಗೌರವಿಸುವ ಸಮಾರಂಭ ಆಗಸ್ಟ್ 13ರಂದು ಪಂಚಕುಲದಲ್ಲಿ ನಡೆಯಲಿದೆ ಎಂದು ಖಟ್ಟರ್ ತಿಳಿಸಿದ್ದಾರೆ.
ಈ ಮಧ್ಯೆ, ಪಂಜಾಬ್ ಸರ್ಕಾರ ಕೂಡ ನೀರಜ್ ಅವರಿಗೆ ₹ 2 ಕೋಟಿ ಬಹುಮಾನ ನೀಡಲು ನಿರ್ಧರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.