ಟೋಕಿಯೊ: ಟೋಕಿಯೊ ಒಲಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ.
49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.
21 ವರ್ಷಗಳ ಬಳಿಕ...
ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.
29 ವರ್ಷದ ಮೀರಾಬಾಯಿ ಒಟ್ಟು 202 ಕೆ.ಜಿ (87 ಕೆ.ಜಿ. ಹಾಗೂ 115 ಕೆ.ಜಿ.) ಭಾರ ಎತ್ತುವ ಮೂಲಕ ಕರ್ಣಂ ಮಲ್ಲೇಶ್ವರಿ ಸಾಧನೆಯನ್ನು ಮೀರಿದರು.
2000ರ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿ ವೇಟ್‌ಲಿಫ್ಟಿಂಗ್ 69 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು.
ಚಿನ್ನ ಗೆದ್ದ ಚೀನಾದ ಹೋವ್ ಝಿಹು ಒಟ್ಟು 210 ಕೆ.ಜಿ (91 ಕೆ.ಜಿ ಹಾಗೂ 116 ಕೆ.ಜಿ) ಭಾರವನ್ನು ಎತ್ತಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.