ಟೋಕಿಯೊ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಶೂಟಿಂಗ್ ಪಿ4 ಮಿಶ್ರ 50 ಮೀ. ಪಿಸ್ತೂಲ್ ಎಚ್1 ವಿಭಾಗದಲ್ಲಿ ಭಾರತದ ಮನೀಶ್ ನರ್ವಾಲ್ ಹಾಗೂ ಸಿಂಗರಾಜ್ ಅದಾನಾ ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಜಯಿಸಿದ್ದಾರೆ.
ಇದರೊಂದಿಗೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
19 ವರ್ಷದ ಶೂಟರ್ ಮನೀಶ್ ನರ್ವಾಲ್, 218.2 ಪಾಯಿಂಟ್ ಗಳಿಸಿ ಪ್ಯಾರಾಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನಕ್ಕೆ ಗುರಿಯಿಟ್ಟರು.
ಇನ್ನೊಂದೆಡೆ ಸಿಂಗರಾಜ್ ಅದಾನಾ, 216.7 ಪಾಯಿಂಟ್ ಕಲೆ ಹಾಕಿ ಬೆಳ್ಳಿ ಪದಕ ಗೆದ್ದರು. ಆ ಮೂಲಕ ಸಿಂಗರಾಜ್,ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಈ ಮೊದಲು ಪುರುಷರ ಪಿ1 10 ಮೀ. ಏರ್ ಪಿಸ್ತೂಲ್ ಎಸ್‌ಎಚ್1 ವಿಭಾಗದಲ್ಲೂ ಕಂಚಿನ ಪದಕ ಗೆದ್ದಿದ್ದರು.
ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ:
ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಇದರಲ್ಲಿ ಮೂರು ಚಿನ್ನ, ಏಳು ಬೆಳ್ಳಿ ಮತ್ತು ಐದು ಕಂಚಿನ ಪದಕಗಳು ಸೇರಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.