ADVERTISEMENT

Vinesh Phogat Retires: ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಆಗಸ್ಟ್ 2024, 2:23 IST
Last Updated 8 ಆಗಸ್ಟ್ 2024, 2:23 IST
<div class="paragraphs"><p>ವಿನೇಶ್ ಫೋಗಟ್‌</p></div>

ವಿನೇಶ್ ಫೋಗಟ್‌

   

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ.

‘ಎಕ್ಸ್‌’ನಲ್ಲಿ ನಿವೃತ್ತಿ ಘೋಷಿಸಿ ಫೋಸ್ಟ್ ಮಾಡಿರುವ ಅವರು, ‘ಕುಸ್ತಿ ನನ್ನ ವಿರುದ್ಧ ಗೆದ್ದಿದೆ, ನಾನು ಸೋತಿದ್ದೇನೆ. ನನ್ನನ್ನು ಕ್ಷಮಿಸಿ. ನಿಮ್ಮ ಕನಸು ಮತ್ತು ನನ್ನ ಧೈರ್ಯ ನುಚ್ಚುನೂರಾಗಿದೆ. ಈಗ ನನಗೆ ಹೆಚ್ಚಿನ ಶಕ್ತಿ ಇಲ್ಲ. ನನ್ನನ್ನು ಕ್ಷಮಿಸಿದ್ದಕ್ಕೆ ನಿಮ್ಮೆಲ್ಲರಿಗೂ ನಾನು ಋಣಿಯಾಗಿರುತ್ತೇನೆ’ ಎಂದು ಹೇಳಿದ್ದಾರೆ.

ADVERTISEMENT

ಮಂಗಳವಾರ ನಡೆದ 50 ಕೆ.ಜಿ ವಿಭಾಗದ ಮಹಿಳೆಯರ ಫ್ರೀಸ್ಟೈಲ್ ಕುಸ್ತಿ ಸೆಮಿಫೈನಲ್‌ನಲ್ಲಿ ವಿನೇಶಾ ಅವರು ಕ್ಯೂಬಾದ ಯುಸೇನೆಯಲಿಸ್ ಗುಜ್ಮನ್ ಲೊಪೇಜ್ ಅವರನ್ನು ಸೋಲಿಸಿ ಫೈನಲ್‌ ತಲುಪಿದ್ದರು. ಅಂದುಕೊಂಡಂತೆ ನಡೆದಿದ್ದರೆ ಬುಧವಾರ(ಆ.7) ರಾತ್ರಿ ಫೈನಲ್‌ನಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಅವರ ಎದುರು ವಿನೇಶಾ ಸೆಣಸಬೇಕಿತ್ತು. ಆದರೆ ನಿಗದಿಯ ದೇಹ ತೂಕಕ್ಕಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ ಕಾರಣ ಅವರು ಪಂದ್ಯದಿಂದಲೇ ಅನರ್ಹಗೊಳ್ಳಬೇಕಾಯಿತು.

ವಿನೇಶ್ ಅವರನ್ನು 50 ಕೆ.ಜಿ ತೂಕದ ವ್ಯಾಪ್ತಿಗೆ ತರಲು ತಂಡದ ನೆರವು ಸಿಬ್ಬಂದಿಯು ಸಕಲ ಪ್ರಯತ್ನಗಳನ್ನೂ ಮಾಡಿತ್ತು. ವಿನೇಶ್ ಅವರ ತಲೆಗೂದಲನ್ನೂ ಕತ್ತರಿಸಲಾಗಿತ್ತು. ವಿನೇಶ್‌ ಸಹ ದೇಹವನ್ನು ದಂಡಿಸಿದ್ದರು. ಆದರೂ ತೂಕವನ್ನು ನಿಗದಿತ ಮಿತಿಗೆ ತರಲು ಸಾಧ್ಯವಾಗಲಿಲ್ಲ

ವಿನೇಶ್ ಫೋಗಟ್ ಅವರು ತಮ್ಮನ್ನು ಅನರ್ಹಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಕ್ರೀಡಾ ನ್ಯಾಯ ಮಂಡಳಿಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಮಗೆ ಜಂಟಿ ಬೆಳ್ಳಿ ಪದಕ ನೀಡಬೇಕು ಎಂದೂ ವಿನೇಶ್ ಬೇಡಿಕೆ ಸಲ್ಲಿಸಿದ್ದಾರೆ. ವಿನೇಶ್ ಅವರು ಮೇಲ್ಮನವಿ ಸಲ್ಲಿಸಿರುವುದನ್ನು ಐಒಎ (ಭಾರತ ಒಲಿಂಪಿಕ್ ಸಂಸ್ಥೆ)ಯ ಮೂಲಗಳು ಖಚಿತಪಡಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.