ಬೆಂಗಳೂರು: ನಗರದ ಯಶ್ ಆರಾಧ್ಯ, ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಪಾತ್ರರಾದ ಭಾರತದ ಮೊದಲ ಮೋಟಾರ್ ಸ್ಪೋರ್ಟ್ಸ್ ಪಟು ಎನಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಯಶ್ ಪ್ರಶಸ್ತಿ ಸ್ವೀಕರಿಸಿದರು. ಒಂಬತ್ತನೇ ವಯಸ್ಸಿನಿಂದಲೇ ರೇಸಿಂಗ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯಶ್, 13 ಚಾಂಪಿಯನ್‌ಷಿಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ಕೇಂದ್ರ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯು ಯಶ್ ಸೇರಿದಂತೆ 49 ಪ್ರತಿಭಾವಂತರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.
2019ರ ಋತುವಿನಲ್ಲಿ ಯಶ್ ಆಗ್ನೇಯ ಏಷ್ಯಾಫಾರ್ಮುಲಾ-4 ಚಾಂಪಿಯನ್‌ಷಿಪ್‌ಗೆ ಪಾದಾರ್ಪಣೆ ಮಾಡಿ, 2 ಬಾರಿ ಪೋಡಿಯಂ ಫಿನಿಶ್ ಮಾಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.