ADVERTISEMENT

ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿ: ಡಕ್ವರ್ಥ್‌–ಬೊಂಜಿ ಫೈನಲ್‌ ‘ಫೈಟ್‌’

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2020, 19:30 IST
Last Updated 15 ಫೆಬ್ರುವರಿ 2020, 19:30 IST

ಬೆಂಗಳೂರು: ಆಸ್ಟ್ರೇಲಿಯಾದ ಜೇಮ್ಸ್‌ ಡಕ್ವರ್ಥ್‌ ಮತ್ತು ಫ್ರಾನ್ಸ್‌ನ ಬೆಂಜಮಿನ್‌ ಬೊಂಜಿ ಅವರು ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ ಮುಖಾಮುಖಿಯಾಗಲಿದ್ದಾರೆ. ಈ ಹೋರಾಟ ಭಾನುವಾರ ನಡೆಯಲಿದೆ.

ಶನಿವಾರ ನಡೆದ ಮೊದಲ ಸೆಮಿಫೈನಲ್‌ನಲ್ಲಿ ನಾಲ್ಕನೇ ಶ್ರೇಯಾಂಕದ ಆಟಗಾರ ಡಕ್ವರ್ಥ್‌ 6–3, 6–2 ನೇರ ಸೆಟ್‌ಗಳಿಂದ ಜೂಲಿಯನ್‌ ಒಸ್ಲೆಪ್ಪೊ ವಿರುದ್ಧ ಸುಲಭವಾಗಿ ಗೆದ್ದರು.

ಸೆಂಟರ್‌ ಕೋರ್ಟ್‌ನಲ್ಲಿ ನಡೆದ ಮತ್ತೊಂದು ಸೆಮಿಫೈನಲ್‌ನಲ್ಲಿ ಬೊಂಜಿ 6–3, 6–4ರಲ್ಲಿ ಇಟಲಿಯ ಸ್ಟೆಫಾನೊ ಟ್ರವಾಗ್ಲಿಯಾಗೆ ಆಘಾತ ನೀಡಿದರು. ಸ್ಟೆಫಾನೊ ಅವರು ಟೂರ್ನಿಯಲ್ಲಿ ಎರಡನೇ ಶ್ರೇಯಾಂಕ ಹೊಂದಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.