ನ್ಯೂಯಾರ್ಕ್: ಅಮೆರಿಕ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸೋಲು ಕಂಡಿರುವ ಭಾರತದ ಸುಮಿತ್ ನಗಾಲ್ ನಿರ್ಗಮಿಸಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ನಗಾಲ್ ಅವರು ನೆದರ್ಲೆಂಡ್ಸ್‌ನ ಟ್ಯಾಲನ್ ಗ್ರೀಕ್ಸ್‌ಪೂರ್ ವಿರುದ್ಧ 1-6 3-6 6-7(8)ರ ಅಂತರದಲ್ಲಿ ಸೋಲು ಕಂಡರು.
ಎರಡು ತಾಸು 20 ನಿಮಿಷಗಳವರೆಗೆ ಸಾಗಿದ ಹೋರಾಟದ ಅಂತಿಮದಲ್ಲಿ ಡಚ್ ಆಟಗಾರ ಮೇಲುಗೈ ಸಾಧಿಸಿದರು.
ವರ್ಷದ ಕೊನೆಯ ಗ್ರ್ಯಾನ್‌ಸ್ಲಾಮ್ ಟೂರ್ನಿಯಾದ ಅಮೆರಿಕ ಓಪನ್ ಪುರುಷ ಡಬಲ್ಸ್ ವಿಭಾಗದಲ್ಲೂ ನಗಾಲ್ ಸ್ಪರ್ಧಿಸುತ್ತಿದ್ದಾರೆ.
ಆಸ್ಟ್ರೇಲಿಯನ್ ಓಪನ್‌ನಲ್ಲಿ ಪ್ರಧಾನ ಸುತ್ತಿಗೆ ಪ್ರವೇಶಿಸಿದ್ದ ನಗಾಲ್, ಈ ವರ್ಷ ಎಲ್ಲ ನಾಲ್ಕು ಗ್ರ್ಯಾನ್‌ಸ್ಲಾಮ್‌ಗಳಲ್ಲಿ ಸ್ಪರ್ಧಿಸುವ ಮೂಲಕ 73ನೇ ರ‍್ಯಾಂಕ್ ಗಳಿಸಿದ್ದಾರೆ.
ಅಮೆರಿಕ ಓಪನ್ ಪುರುಷರ ಡಬಲ್ಸ್ ವಿಭಾಗದಲ್ಲಿ ರೋಹನ್ ಬೋಪಣ್ಣ, ಯೂಕಿ ಭಾಂಬ್ರಿ, ಎನ್. ಶ್ರೀರಾಮ್ ಬಾಲಾಜಿ ಸಹ ತಮ್ಮ ತಮ್ಮ ಜೊತೆಗಾರರೊಂದಿಗೆ ಕಣಕ್ಕಿಳಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.