ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನೆದರ್ಲೆಂಡ್ಸ್ ವಿರುದ್ಧ ಆಸ್ಟ್ರೇಲಿಯಾ 309 ರನ್ಗಳ ಜಯ ಸಾಧಿಸಿದೆ.
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿತು.
ಆಸ್ಟ್ರೇಲಿಯಾ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 399 ರನ್ ಪೇರಿಸಿತು. ಈ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ 21 ಓವರ್ಗಳಲ್ಲಿ 90 ರನ್ ಗಳಿಸಿ ಎಲ್ಲಾ ವಿಕೆಟ್ ಕಳೆದುಕೊಂಡಿತು.
ವಾರ್ನರ್ ಮತ್ತು ಮ್ಯಾಕ್ಸ್ವೆಲ್ ಶತಕ ಸಿಡಿಸಿದರು. ಹಾಗೇ ಸ್ಮಿತ್ ಮತ್ತು ಲಾಬುಶೇನ್ ಅರ್ಧ ಶತಕಗಳಿಸಿ ಗಮನ ಸೆಳೆದರು. ಈ ಪಂದ್ಯದಲ್ಲಿ ಜಂಪಾ 4 ವಿಕೆಟ್ ಪಡೆದರು.
ನೆದರ್ಲೆಂಡ್ಸ್ ತಂಡದವರು ಕಳಪೆ ಬ್ಯಾಟಿಂಗ್ ಮಾಡುವ ಮೂಲಕ ಸುಲಭವಾಗಿ ಸೋಲು ಕಂಡರು. ಲಾನ್ ವೀಕ್ 4 ವಿಕೆಟ್ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.