ADVERTISEMENT

IND vs NZ: ಸಚಿನ್, ಪಾಂಟಿಂಗ್ ದಾಖಲೆ ಮುರಿದ ಕಿಂಗ್ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ನವೆಂಬರ್ 2023, 11:18 IST
Last Updated 15 ನವೆಂಬರ್ 2023, 11:18 IST
<div class="paragraphs"><p>ವಿರಾಟ್ ಕೊಹ್ಲಿ</p></div>

ವಿರಾಟ್ ಕೊಹ್ಲಿ

   

(ರಾಯಿಟರ್ಸ್ ಚಿತ್ರ)

ಮುಂಬೈ: ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಸಾಲಿನಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ದಾಖಲೆಯನ್ನು ಭಾರತದ ವಿರಾಟ್ ಕೊಹ್ಲಿ ಮುರಿದಿದ್ದಾರೆ.

ADVERTISEMENT

ಈ ಮೂಲಕ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಾರ್ವಕಾಲಿಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಕರ್ಷಕ ಶತಕ ಗಳಿಸಿರುವ ವಿರಾಟ್, ಈ ಸಾಧನೆ ಮಾಡಿದ್ದಾರೆ.

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ (18426) ಗಳಿಸಿದ್ದಾರೆ. ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ (14,234) ಎರಡನೇ ಸ್ಥಾನದಲ್ಲಿದ್ದಾರೆ.

ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಾಧನೆ:

  • ಸಚಿನ್ ತೆಂಡೂಲ್ಕರ್: 18426

  • ಕುಮಾರ ಸಂಗಕ್ಕರ: 14234

  • ವಿರಾಟ್ ಕೊಹ್ಲಿ: 13705*

  • ರಿಕಿ ಪಾಂಟಿಂಗ್: 13704

  • ಸನತ್ ಜಯಸೂರ್ಯ: 13430

ವಿರಾಟ್ ಕೊಹ್ಲಿ

ಸಚಿನ್ ದಾಖಲೆ ಮುರಿದ ಕೊಹ್ಲಿ...

ಇನ್ನು ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪೈಕಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ.

2003ರ ಏಕದಿನ ವಿಶ್ವಕಪ್‌ನಲ್ಲಿ ಸಚಿನ್ 673 ರನ್ ಗಳಿಸಿದ್ದರು. ಪ್ರಸಕ್ತ ತವರಿನಲ್ಲಿ ಸಾಗುತ್ತಿರುವ ವಿಶ್ವಕಪ್‌ನಲ್ಲಿ ಈ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.

ಅಲ್ಲದೆ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ 8ನೇ ಸಲ 50ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಗೂ ಕೊಹ್ಲಿ ಭಾಜನರಾಗಿದ್ದಾರೆ.

ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ರನ್ ಸಾಧನೆ:

  • ವಿರಾಟ್ ಕೊಹ್ಲಿ: 674* ರನ್ (2023)

  • ಸಚಿನ್ ತೆಂಡೂಲ್ಕರ್: 673 ರನ್ (2003)

  • ಮ್ಯಾಥ್ಯೂ ಹೇಡನ್: 659 ರನ್ (2007)

  • ರೋಹಿತ್ ಶರ್ಮಾ: 648 ರನ್ (2019)

  • ಡೇವಿಡ್ ವಾರ್ನರ್: 647 ರನ್ (2019)

ವಿರಾಟ್ ಕೊಹ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.