ADVERTISEMENT

CWC 2023 | ವಿರಾಟ್ 'ಶತಕಗಳ ಅರ್ಧಶತಕ' - ಮುರಿಯಿತು ಕ್ರಿಕೆಟ್ ದೇವರ ದಾಖಲೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ನವೆಂಬರ್ 2023, 11:38 IST
Last Updated 15 ನವೆಂಬರ್ 2023, 11:38 IST
<div class="paragraphs"><p>ವಿರಾಟ್ ಕೊಹ್ಲಿ</p></div>

ವಿರಾಟ್ ಕೊಹ್ಲಿ

   

(ಪಿಟಿಐ ಚಿತ್ರ)

ಮುಂಬೈ: ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕಗಳ ಅರ್ಧಶತಕ ಸಾಧಿಸಿದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾರತದ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.

ADVERTISEMENT

ಈ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ (49 ಶತಕ) ಅವರ ಹೆಸರಲ್ಲಿದ್ದ ದಾಖಲೆಯನ್ನು ಕಿಂಗ್ ಕೊಹ್ಲಿ ಮುರಿದಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ, ಸ್ಮರಣೀಯ ಸಾಧನೆ ಮಾಡಿದ್ದಾರೆ.

ಇದೇ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಶತಕ ಗಳಿಸದ್ದ ವಿರಾಟ್, ಸಚಿನ್ ದಾಖಲೆಯನ್ನು ಸರಿಗಟ್ಟಿದ್ದರು.

ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಾಧನೆ:

ವಿರಾಟ್ ಕೊಹ್ಲಿ: 50

ಸಚಿನ್ ತೆಂಡೂಲ್ಕರ್: 49

ರೋಹಿತ್ ಶರ್ಮಾ: 31

ರಿಕಿ ಪಾಂಟಿಂಗ್: 30

ಸನತ್ ಜಯಸೂರ್ಯ: 28

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.