ಮುಂಬೈ: ಏಕದಿನ ಕ್ರಿಕೆಟ್‌ನಲ್ಲಿ ಶತಕಗಳ ಅರ್ಧಶತಕದ ದಾಖಲೆ ಬರೆದಿರುವ ವಿರಾಟ್ ಕೊಹ್ಲಿ ಅವರನ್ನು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮುಕ್ತಕಂಠದಿಂದ ಹೊಗಳಿದ್ದಾರೆ.
'ಇಷ್ಟೆಲ್ಲ ಸಾಧನೆ ಮಾಡಲು, ಸಾಕಷ್ಟು ಕಷ್ಟಪಡಬೇಕು. ಇದು ಇಲ್ಲಿಗೆ ಮುಗಿದಿಲ್ಲ. ಇದೊಂದು ಅಸಾಧಾರಣ ಸಾಧನೆ' ಎಂದು ಹೇಳಿದ್ದಾರೆ.
ಕೋಲ್ಕತ್ತದಲ್ಲಿ ಮಾಜಿ ನಾಯಕ ಗಂಗೂಲಿ ನೀಡಿರುವ ಹೇಳಿಕೆಯನ್ನು 'ಎನ್‌ಡಿಟಿವಿ' ವರದಿ ಮಾಡಿದೆ.
ನ್ಯೂಜಿಲೆಂಡ್ ಮಣಿಸಿದ ಭಾರತ ತಂಡವು ಫೈನಲ್‌ಗೆ ಪ್ರವೇಶಿಸಿದೆ. ಈಗ 12 ವರ್ಷಗಳ ಬಳಿಕ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ.
ಭಾರತೀಯ ಕ್ರಿಕೆಟ್ ತಂಡವು ಈಗ ಅದ್ಭುತ ಆಟವನ್ನು ಆಡುತ್ತಿದೆ. ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಸೇರಿದಂತೆ ಎಲ್ಲ ಆಟಗಾರರು ಉತ್ತಮ ಲಯದಲ್ಲಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ.
ಭಾರತವು ಈಗ ಪರಿಪೂರ್ಣ ತಂಡವಾಗಿದೆ. ಅಸಾಧಾರಣ ಪ್ರತಿಭೆಗಳನ್ನು ಹೊಂದಿದೆ ಎಂದು ಗಂಗೂಲಿ ಹೇಳಿದ್ದಾರೆ.
ವಾಂಖೆಡೆ ಪಿಚ್ ಅನ್ನು ಭಾರತದ ಅನುಕೂಲಕ್ಕಾಗಿ ಬದಲಾಯಿಸಲಾಗಿತ್ತು ಎಂಬ ಆರೋಪಗಳನ್ನು ಗಂಗೂಲಿ ತಳ್ಳಿ ಹಾಕಿದ್ದಾರೆ.
ನನಗನಿಸುತ್ತದೆ, ಇದೊಂದು ಉತ್ತಮ ಪಿಚ್ ಆಗಿತ್ತು. ಎರಡೂ ತಂಡಗಳಿಗೂ ಸಮಾನವಾಗಿತ್ತು. ವಾಂಖೆಡೆ ಮೈದಾನದಲ್ಲಿ ಯಾವುದೇ ಕೊರತೆ ಇರಲಿಲ್ಲ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.