ADVERTISEMENT

ಶ್ರೀಲಂಕಾ, ದ.ಆಫ್ರಿಕಾ ವಿರುದ್ಧದ ಪಂದ್ಯದಿಂದಲೂ ಪಾಂಡ್ಯ ಹೊರಗುಳಿಯುವ ಸಾಧ್ಯತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ನವೆಂಬರ್ 2023, 9:32 IST
Last Updated 1 ನವೆಂಬರ್ 2023, 9:32 IST
<div class="paragraphs"><p>ಹಾರ್ದಿಕ್ ಪಾಂಡ್ಯ</p></div>

ಹಾರ್ದಿಕ್ ಪಾಂಡ್ಯ

   

(ರಾಯಿಟರ್ಸ್ ಚಿತ್ರ)

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಆರು ಗೆಲುವುಗಳನ್ನು ಗಳಿಸಿರುವ ಟೀಮ್ ಇಂಡಿಯಾ, ಅಜೇಯ ಓಟವನ್ನು ಮುಂದುವರಿಸುವ ತವಕದಲ್ಲಿದೆ.

ADVERTISEMENT

ಈ ನಡುವೆ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಶ್ರೀಲಂಕಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಪಂದ್ಯಗಳಿಂದಲೂ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಪುಣೆಯಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ತಮ್ಮದೇ ಬೌಲಿಂಗ್‌ನಲ್ಲಿ ಚೆಂಡನ್ನು ತಡೆಯಲು ಯತ್ನಿಸಿದ ವೇಳೆಯಲ್ಲಿ ಪಾಂಡ್ಯ ಕಾಲಿಗೆ ಗಾಯವಾಗಿತ್ತು.

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನ ಹಂತದಲ್ಲಿರುವ ಪಾಂಡ್ಯ, ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಂದ ಹೊರಗುಳಿದಿದ್ದರು. ಪಾಂಡ್ಯ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿದ್ದ ಮೊಹಮ್ಮದ್ ಶಮಿ, ಎರಡು ಪಂದ್ಯಗಳಲ್ಲಿ (ಐದು ವಿಕೆಟ್ ಸೇರಿದಂತೆ) ಒಂಬತ್ತು ವಿಕೆಟ್‌ಗಳನ್ನು ಕಬಳಿಸಿ ಗಮನ ಸೆಳೆದಿದ್ದರು.

ಪಾಂಡ್ಯ ಯಾವಾಗ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಮುಂದಿನ ಎರಡು ದಿನಗಳಲ್ಲಿ ಖಚಿತತೆ ಲಭ್ಯವಾಗುವ ನಿರೀಕ್ಷೆಯಿದೆ.

ರೋಹಿತ್ ಶರ್ಮಾ ಬಳಗವು ನವೆಂಬರ್ 2ರಂದು ಶ್ರೀಲಂಕಾ, ನ.5ರಂದು ದಕ್ಷಿಣ ಆಫ್ರಿಕಾ ಮತ್ತು ನ.12ರಂದು ನೆದರ್ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.