ADVERTISEMENT

CWC 2023 | ಗಾಯಾಳು ಪಾಂಡ್ಯ ಹೊರಕ್ಕೆ; ಕೆ.ಎಲ್. ರಾಹುಲ್‌ ಉಪನಾಯಕ: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ನವೆಂಬರ್ 2023, 11:14 IST
Last Updated 4 ನವೆಂಬರ್ 2023, 11:14 IST
<div class="paragraphs"><p>ಕೆ.ಎಲ್. ರಾಹುಲ್</p></div>

ಕೆ.ಎಲ್. ರಾಹುಲ್

   

(ಪಿಟಿಐ ಚಿತ್ರ)

ಬೆಂಗಳೂರು: ಪ್ರಸಕ್ತ ಸಾಗುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಗಾಯಕ್ಕೆ ತುತ್ತಾಗಿರುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಟೂರ್ನಿಯಿಂದಲೇ ನಿರ್ಗಮಿಸಿದ್ದಾರೆ.

ADVERTISEMENT

ಈ ಹಿನ್ನೆಲೆಯಲ್ಲಿ ಉಪನಾಯಕ ಸ್ಥಾನಕ್ಕೆ ಕರ್ನಾಟಕದ ಕೆ.ಎಲ್. ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಈ ಕುರಿತು ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.

ಹಾರ್ದಿಕ್ ಪಾಂಡ್ಯ ಅಲಭ್ಯರಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ ಕೃಷ್ಣ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಬೌಲಿಂಗ್‌ ವೇಳೆ ಚೆಂಡನ್ನು ತಡೆಯಲು ಯತ್ನಿಸಿದ ಸಂದರ್ಭದಲ್ಲಿ ಹಾರ್ದಿಕ್ ಕಾಲಿಗೆ ಗಾಯವಾಗಿತ್ತು.

ವಿಶ್ವಕಪ್‌ನಲ್ಲಿ ಉಳಿದಿರುವ ಪಂದ್ಯಗಳಲ್ಲಿ ಹೊರಗುಳಿಯುವುದನ್ನು ಅರಗಿಸಿಕೊಳ್ಳುವುದು ಕಷ್ಟಕರ ಎಂದು ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯಿಸಿದ್ದಾರೆ.

ಈ ತಂಡವು ನನ್ನ ಪಾಲಿಗೆ ವಿಶೇಷವಾಗಿದ್ದು, ವಿಶ್ವಕಪ್ ಗೆಲ್ಲುವ ನಂಬಿಕೆಯಿದೆ. ನಾನು ತಂಡದ ಜತೆಗಿದ್ದು, ಪ್ರತಿಯೊಂದು ಪಂದ್ಯದಲ್ಲೂ ಹುರಿದುಂಬಿಸಲಿದ್ದೇನೆ. ನಿಮ್ಮೆಲ್ಲರ ಪ್ರೀತಿ, ಬೆಂಬಲಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.