ಮೊಟೇರಾ: ಈ ಬಾರಿಯ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಬೌಲಿಂಗ್ ಆಯ್ದುಕೊಂಡಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.
ಉಭಯ ತಂಡಗಳು 2019ರ ಫೈನಲ್‌ನಲ್ಲಿ ಸೆಣಸಾಟ ನಡೆಸಿದ್ದವು. ಟೈ ಆಗಿದ್ದ ಪಂದ್ಯದಲ್ಲಿ ‘ಬೌಂಡರಿ ಕೌಂಟ್‘ ಆಧಾರದಲ್ಲಿ ಇಂಗ್ಲೆಂಡ್ ತಂಡವು ಜಯಿಸಿತ್ತು. ಇದೀಗ, ಮುಯ್ಯಿ ತೀರಿಸಿಕೊಳ್ಳುವ ಛಲದಲ್ಲಿ ನ್ಯೂಜಿಲೆಂಡ್ ಬಳಗ ಕಣಕ್ಕಿಳಿಯಲಿದೆ.
ಜೋಸ್ ಬಟ್ಲರ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಇಂಗ್ಲೆಂಡ್ ತಂಡದ ಆಟಗಾರರು ತಮ್ಮ ಆಟದ ಶೈಲಿಯನ್ನು ಬದಲಿಸಿಕೊಂಡಿದ್ದಾರೆ. ಟೆಸ್ಟ್, ಏಕದಿನ ಮತ್ತು ಟಿ20 ಮಾದರಿಗಳಲ್ಲಿ ಇಂಗ್ಲೆಂಡ್ ಆಟಗಾರರ ‘ಬಜ್ ಬಾಲ್ ಸೂತ್ರ‘ವು ಎದುರಾಳಿಗಳಿಗೆ ಸಿಂಹಸ್ವಪ್ನವಾಗಿದೆ.
ಆದರೆ, ನ್ಯೂಜಿಲೆಂಡ್ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ಕೇನ್ ವಿಲಿಯಮ್ಸನ್ ಅವರೇ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಆದ್ದರಿಂದ ಟಾಮ್ ಲಥಾಮ್ ನಾಯಕತ್ವ ವಹಿಸಿದ್ದಾರೆ.
ತಂಡಗಳು ಹೀಗಿವೆ
ಇಂಗ್ಲೆಂಡ್: ಜಾಸ್ ಬಟ್ಲರ್ (ನಾಯಕ–ವಿಕೆಟ್‌ಕೀಪರ್), ಜೋ ರೂಟ್, ಜಾನಿ ಬೆಸ್ಟೊ (ವಿಕೆಟ್‌ಕೀಪರ್), ಹ್ಯಾರಿ ಬ್ರೂಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಮೋಯಿನ್ ಅಲಿ, ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಆದಿಲ್ ರಶೀದ್, ಮಾರ್ಕ್ ವುಡ್
ನ್ಯೂಜಿಲೆಂಡ್: ಟಾಮ್ ಲಥಾಮ್ (ನಾಯಕ–ವಿಕೆಟ್‌ಕೀಪರ್), ವಿಲ್ ಯಂಗ್, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಜೇಮ್ಸ್ ನಿಶಾಮ್, ಗ್ಲೆನ್ ಫಿಲಿಪ್ಸ್ (ವಿಕೆಟ್‌ಕೀಪರ್), ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟನರ್, ಟ್ರೆಂಟ್ ಬೌಲ್ಟ್, ಮ್ಯಾಟ್ ಹೆನ್ರಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.