ಬೆಂಗಳೂರು: ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಶೃಂಗ ಎನಿಸಿರುವ ‘ಬೆಂಗಳೂರು ಟೆಕ್ ಶೃಂಗ 2024’ಕ್ಕೆ ನಗರದ ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದರು.
ಈ ಬಾರಿಯ ಶೃಂಗದ ವಿಷಯ ‘ಅನ್‌ಬೌಂಡ್’ (ಅನಿಯಮಿತ) ಎಂಬುದಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಕುಮಾರ್ ಬಚ್ಚೇಗೌಡ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಏಕರೂಪ್ ಕೌರ್, ಶಾಸಕ ರಿಜ್ವಾನ್ ಅರ್ಷದ್, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್, ಕ್ರಿಸ್ ಗೋಪಾಲಕೃಷ್ಣನ್, ಸ್ವಿಗಿ ಸಿಇಒ ಶ್ರೀಹರ್ಷ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.