ನವದೆಹಲಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ ‘ಎಂ’ ಸರಣಿಯ ಹೊಸ ಸ್ಮಾರ್ಟ್‌ಫೋನ್ Samsung Galaxy M34 5G ಭಾರತದಲ್ಲಿ ಬಿಡುಗಡೆಯಾಗಿದೆ.
ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯ ಫೋನ್ ಆಗಿದ್ದು, ಆಕರ್ಷಕ ಕ್ಯಾಮೆರಾ, ಉತ್ತಮ ಬ್ಯಾಟರಿ ಸೇರಿದಂತೆ ಅನೇಕ ಫೀಚರ್‌ಗಳನ್ನು ಒಳಗೊಂಡಿದೆ.
ವೈಶಿಷ್ಟತೆಗಳು...
ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಪೂರ್ಣ ಎಚ್‌ಡಿ ಸ್ಕ್ರೀನ್ ರೆಸಲ್ಯೂಶನ್ ಮತ್ತು 120Hz ನ ರಿಫ್ರೆಶ್ ದರದೊಂದಿಗೆ 6.5 ಇಂಚಿನ AMOLED ಡಿಸ್ ಪ್ಲೇಯನ್ನು ಹೊಂದಿದೆ. ಈ ಫೋನ್ ಎಕ್ಸಿನೊಸ್ 1280 ಪ್ರೊಸೆಸರ್ನಿಂದ ಚಾಲಿತವಾಗಿದೆ.
ಟ್ರಿಪಲ್ ಕ್ಯಾಮೆರಾ ಹೊಂದಿರುವ ಈ ಫೋನ್‌ನಲ್ಲಿ ಒಐಎಸ್ ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಪ್ರಾಥಮಿಕ ಕ್ಯಾಮೆರಾ ಇದೆ. 8- ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಮುಂಭಾಗದಲ್ಲಿ, ಸೆಲ್ಫಿ ಮತ್ತು ವಿಡಿಯೊ ಕರೆಗಾಗಿ 12-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
ಈ ಸ್ಮಾರ್ಟ್‌ಫೋನ್ ಅನ್ನು ಮಾನ್‌ಸ್ಟರ್ ಶಾಟ್ 2.0 ಎಂಬುದಾಗಿ ಕರೆಯಲಾಗುತ್ತದೆ ಎಂದು ಸ್ಯಾಮ್‌ಸಂಗ್ ಹೇಳಿದೆ. ಅಂದರೆ ಬಳಕೆದಾರರಿಗೆ ಒಂದೇ ಟೇಕ್‌ನಲ್ಲಿ ಅನೇಕ ಫೋಟೊಗಳನ್ನು ಕ್ಲಿಕ್ ಮಾಡಲು ಸಾಧ್ಯ. ಶೇಕ್ ಫ್ರೀ, ನೈಟೋಗ್ರಫಿ ಎಂಬ ವಿಶೇಷ ಆಯ್ಕೆಯೂ ಇದೆ.
ಈ ಫೋನ್‌ನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿ ಇದೆ. 25W ವೇಗದಲ್ಲಿ ಚಾರ್ಜಿಂಗ್ ಮಾಡಬಹುದು.
ಬೆಲೆ ಮತ್ತು ಲಭ್ಯತೆ: ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಎರಡು ವೇರಿಯೆಂಟ್ನಲ್ಲಿ ಅನಾವರಣಗೊಂಡಿದೆ. ಇದರ 6GB RAM + 128GB ಸ್ಟೋರೇಜ್ ಆಯ್ಕೆಗೆ ₹16,999 ರಷ್ಟಿದರೆ, 8GB RAM + 128GB ಬೆಲೆ ₹17,999 ರಷ್ಟಿದೆ. ಈ ಫೋನ್ ಅಮೆಜಾನ್ನಲ್ಲಿ ಇಂದಿನಿಂದ ಖರೀದಿಗೆ ಸಿಗಲಿದೆ. ಇದು ಸಿಲ್ವರ್, ಮಿಡ್ನೈಟ್ ಬ್ಲೂ, ವಾಟರ್ಫಾಲ್ ಬ್ಲೂ ಬಣ್ಣಗಳಲ್ಲಿ ಲಭ್ಯವಿದೆ.
ಓದಿ... Samsung Galaxy S21 FE 5G | ಸ್ಯಾಮ್‌ಸಂಗ್ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.