ನವದೆಹಲಿ: ದೇಶದಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಏಕರೂಪದ ಚಾರ್ಜರ್ ಅನ್ನು ಬಳಸುವಂತೆ ಸರ್ಕಾರ ಶೀಘ್ರದಲ್ಲೇ ಸೂಚನೆ ನೀಡಲಿದೆ. ಈಗಾಗಲೇ ಸರ್ಕಾರ, ಉದ್ಯಮದ ಪ್ರಮುಖ ಕಂಪನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ್ದು, ಒಪ್ಪಿಗೆ ಪಡೆದುಕೊಂಡಿದೆ.
ಯುಎಸ್‌ಬಿ ಟೈಪ್ ಸಿ ಚಾರ್ಜರ್ ಅನ್ನು ಎಲ್ಲ ಸ್ಮಾರ್ಟ್‌ಫೋನ್‌ಗಳಲ್ಲಿ ಬಳಸಲು ನಿರ್ಧರಿಸಲಾಗಿದೆ.
ಈಗಾಗಲೇ ಎಲ್ಲ ಪ್ರಮುಖ ಆ್ಯಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ಯುಎಸ್‌ಬಿ ಟೈಪ್ ಸಿ ಚಾರ್ಜರ್ ಬಳಸಲಾಗುತ್ತಿದೆ. ಆದರೆ, ಆ್ಯಪಲ್ ಕಂಪನಿಯ ಐಫೋನ್‌ಗಳಲ್ಲಿ ಲೈಟನಿಂಗ್ ಕೇಬಲ್ ಬಳಸಲಾಗುತ್ತಿದೆ.
ಮುಂದೆ ದೇಶದಲ್ಲಿ ಉತ್ಪಾದನೆಯಾಗುವ ಹಾಗೂ ಮಾರಾಟವಾಗುವ ಎಲ್ಲ ಸ್ಮಾರ್ಟ್‌ಫೋನ್‌ಗಳಲ್ಲಿ ಯುಎಸ್‌ಬಿ ಟೈಪ್ ಸಿ ಚಾರ್ಜರ್ ಬಳಸಲು ಸರ್ಕಾರ ಸೂಚಿಸಿದೆ. ಹೀಗಾಗಿ ಎಲ್ಲ ಕಂಪನಿಗಳ ಸ್ಮಾರ್ಟ್‌ಫೋನ್‌ಗಳಲ್ಲಿ ಏಕರೂಪದ ಚಾರ್ಜಿಂಗ್ ಪೋರ್ಟ್ ಇರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.