ಬೆಂಗಳೂರು: ಮೆಟಾ ಒಡೆತನದ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಎದುರಿಸುತ್ತಿದ್ದ ಲಾಗಿನ್ ಸಮಸ್ಯೆಯನ್ನು ಸರಿಪಡಿಸಿರುವುದಾಗಿ ಮೆಟಾದ ವಕ್ತಾರ ಆ್ಯಂಡಿ ಸ್ಟೋನ್ ಅವರು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪೋಸ್ಟ್‌ನಲ್ಲಿ, ‘ತಾಂತ್ರಿಕ ಸಮಸ್ಯೆಯಿಂದಾಗಿ ಜನರು ತೊಂದರೆ ಅನುಭವಿಸಿದರು. ನಾವು ಸಾಧ್ಯವಾದಷ್ಟು ಬೇಗ ಪ್ರತಿಯೊಬ್ಬರ ಸಮಸ್ಯೆಯನ್ನು ಪರಿಹರಿಸಿದ್ದೇವೆ, ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.
ಬಳಕೆದಾರರ ಫೇಸ್‌ಬುಕ್ ಖಾತೆಗಳು ಇದ್ದಕ್ಕಿದ್ದಂತೆ ಲಾಗೌಟ್ ಆಗಿದ್ದವು. ನಂತರ ಲಾಗಿನ್ ಆಗಲು ಸಾಧ್ಯವಾಗದೆ, ಬಳಕೆದಾರರು ಪರದಾಡಿದರು. ಪಾಸ್‌ವರ್ಡ್ ಸರಿಯಾಗಿಲ್ಲ ಎಂಬ ಸಂದೇಶ ಬರುತ್ತಲೇ ಇತ್ತು ಎಂದು ಬಳಕೆದಾರರು ತಾವು ಎದುರಿಸಿದ ಸಮಸ್ಯೆಯನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ಈ ಕುರಿತಂತೆ #facebookdown ಹಾಗೂ #instagramdown ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.