ಸ್ಟಾಕ್‌ಹೋಮ್: 2021ನೇ ಸಾಲಿನ ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಬುಧವಾರ ಘೋಷಣೆಯಾಗಿದೆ. ರಸಾಯನ ಶಾಸ್ತ್ರ ವಿಜ್ಞಾನಿಗಳಾದಬೆಂಜಮಿನ್ ಲಿಸ್ಟ್ ಹಾಗೂ ಡೇವಿಡ್ ಮ್ಯಾಕ್‌ಮಿಲನ್‌ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ರಸಾಯನ ವಿಜ್ಞಾನದಲ್ಲಿ ಮಹತ್ತರ ಕಾರ್ಯ ಮಾಡಿದ್ದಕ್ಕಾಗಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಸಮಿತಿ ಬುಧವಾರ ತಿಳಿಸಿದೆ.
’ಅಸಮತೋಲಿತ ಆರ್ಗನೊಕ್ಯಾಟಲೀಸಿಸ್’ (asymmetric organocatalysis) ಅಭಿವೃದ್ಧಿಗಾಗಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿ ಸಮಿತಿ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.