ನವದೆಹಲಿ: ಒಟಿಟಿ ಬಿಗ್‌ಬಾಸ್ ವಿಜೇತ ಎಲ್ವಿಶ್ ಯಾದವ್, ಯುಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆ ಬಗ್ಗೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಎಲ್ವಿಶ್ ಯಾದವ್ ಮತ್ತು ಅವರ ಸಹಚರರು ಸಾಗರ್ ಠಾಕೂರ್ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಸಾಗರ್ ಕೈ, ಕಾಲು ಮತ್ತು ಬೆನ್ನಿನ ಮೇಲೆ ಸಾಕಷ್ಟು ಗಾಯಗಳಾಗಿವೆ. ಇವರಿಬ್ಬರ ನಡುವೆ ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಜಗಳ ಶುರುವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಇವರ ನಡುವಿನ ಗಲಾಟೆಯ ವಿಡಿಯೊಗಳು ಹಾಗೂ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.