ಲಂಡನ್: ಭಾರತದಲ್ಲಿ ಹಿಂಸಾತ್ಮಕ ಕೃತ್ಯಗಳಿಗೆ ಕಾರಣವಾಗುತ್ತಿರುವ ಸುಳ್ಳುಸುದ್ದಿಗಳಿಗೆ ಕಡಿವಾಣ ಹಾಕಲು ಗೂಗಲ್ ಮುಂದಾಗಿದೆ.
ನಕಲಿ ಸುದ್ದಿ ಹರಡುವುದಕ್ಕೂ ಮೊದಲೇ, ಅದನ್ನು ಯೂಟ್ಯೂಬ್ ಮತ್ತು ಎಲ್ಲ ಮಾದರಿಯ ಸಾಮಾಜಿಕ ಜಾಲತಾಣಗಳಲ್ಲಿ ತೆಗೆದುಹಾಕುವುದು ಹಾಗೂ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಸಾಧ್ಯವಿರುವ ಎಲ್ಲ ಆಯ್ಕೆಗಳನ್ನು ಬಳಸುವ ಗುರಿಯನ್ನು ಗೂಗಲ್ ಹೊಂದಿದೆ.
ಬೇರೆ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಅತ್ಯಂತ ವೇಗವಾಗಿ ಸುಳ್ಳು ಸುದ್ದಿ ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುತ್ತಿದೆ. ಅದು ರಾಜಕೀಯ ಮತ್ತು ಧಾರ್ಮಿಕ ಸಂಘರ್ಷಕ್ಕೆ ಕಾರಣವಾಗುತ್ತಿದೆ.
ಈಗಾಗಲೇ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ದೇಶನದಂತೆ, ಸುಳ್ಳು ಸುದ್ದಿ ಹರಡುವ ಯೂಟ್ಯೂಬ್ ಚಾನೆಲ್, ಫೇಸ್‌ಬುಕ್ ಪೇಜ್, ವಾಟ್ಸ್‌ಆ್ಯಪ್ ಖಾತೆ ಮತ್ತು ಟ್ವಿಟರ್‌ಗೆ ನಿರ್ಬಂಧ ಹೇರಲಾಗುತ್ತಿದೆ.
ಮುಂದೆ, ಗೂಗಲ್ ಭಾರತ ಕೇಂದ್ರಿತವಾಗಿ ನಕಲಿ ಸುದ್ದಿ ತಡೆಗೆ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.