ADVERTISEMENT

ದೇಶದ ಪ್ರಮುಖ ನಗರಗಳಲ್ಲಿ ಇನ್‌ಸ್ಟಾಗ್ರಾಂ ಡೌನ್‌; ಮೆಟಾ ವಿರುದ್ಧ ಬಳಕೆದಾರರು ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಅಕ್ಟೋಬರ್ 2024, 9:25 IST
Last Updated 8 ಅಕ್ಟೋಬರ್ 2024, 9:25 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ಮೆಟಾ ಒಡೆತನದ ಜನಪ್ರಿಯ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂ ಸೇವೆಯಲ್ಲಿ ಮಂಗಳವಾರ ವ್ಯತ್ಯಯ ಉಂಟಾಗಿದೆ.

ಇಂದು ಬೆಳಿಗ್ಗೆ 11.15ರಿಂದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ ಸೇವೆಗಳ ಕುರಿತು ಮಾಹಿತಿ ಒದಗಿಸುವ ‘ಲೈವ್ ಡಿಟೆಕ್ಟರ್’ ತಿಳಿಸಿದೆ.

ADVERTISEMENT

ಶೇ 64ರಷ್ಟು ಬಳಕೆದಾರರಿಗೆ ಲಾಗ್ ಇನ್‌ ಮಾಡುವಲ್ಲಿ ಸಮಸ್ಯೆ ಕಾಣಿಸಿಕೊಂಡರೆ, ಶೇ 24ರಷ್ಟು ಬಳಕೆದಾರರಿಗೆ ಸರ್ವರ್‌ ಸಂಪರ್ಕದಲ್ಲಿಯೇ ಸಮಸ್ಯೆ ಕಾಣಿಸಿಕೊಂಡಿದೆ.

ದೆಹಲಿ, ಜೈಪುರ, ಲಖನೌ, ಮುಂಬೈ, ಅಹಮದಾಬಾದ್, ಕೋಲ್ಕತ್ತ, ಹೈದರಾಬಾದ್, ಬೆಂಗಳೂರು, ಚೆನ್ನೈ ಸೇರಿದಂತೆ ಹಲವು ನಗರಗಳಲ್ಲಿ ಅಡಚಣೆ ಉಂಟಾಗಿದೆ ಎಂದು ತಿಳಿದುಬಂದಿದೆ.

‘ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಹಲವು ಬಳಕೆದಾರರು ದೂರಿದ್ದು, ‘something went wrong’ ಎಂದು ತೋರಿಸುವ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಪದೇ ಪದೇ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದಕ್ಕೆ ಮೆಟಾ ವಿರುದ್ಧ ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.