ADVERTISEMENT

ಭಾರತದಲ್ಲಿ ಸಾಮಾಜಿಕ ಮಾಧ್ಯಮ ನಿಯಮಗಳು ತುಂಬಾ ಕಟ್ಟುನಿಟ್ಟಾಗಿವೆ: ಎಲಾನ್ ಮಸ್ಕ್

ಪಿಟಿಐ
Published 13 ಏಪ್ರಿಲ್ 2023, 4:07 IST
Last Updated 13 ಏಪ್ರಿಲ್ 2023, 4:07 IST
ಎಲಾನ್ ಮಸ್ಕ್
ಎಲಾನ್ ಮಸ್ಕ್   

ಲಂಡನ್: ಭಾರತದಲ್ಲಿ ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ನಿಯಮಗಳು ತುಂಬಾ ಕಟ್ಟುನಿಟ್ಟಾಗಿವೆ ಎಂದು ಟ್ವಿಟರ್ ಸಿಇಒ, ಉದ್ಯಮಿ ಎಲಾನ್ ಮಸ್ಕ್ ಹೇಳಿದ್ದಾರೆ.

ಸ್ಯಾನ್‌ಫ್ರಾನ್ಸಿಸ್ಕೊದಲ್ಲಿ ಬಿಬಿಸಿಗೆ ಸಂದರ್ಶನ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧಿಸಿದ ಹಲವು ಟ್ವೀಟ್‌ಗಳನ್ನು ನಿರ್ಬಂಧಿಸುವ ನಿರ್ದೇಶನಕ್ಕೆ ಸಂಬಂಧಿಸಿದಂತೆ 'ನಿಖರ ಮಾಹಿತಿ ಇಲ್ಲ' ಎಂದು ಹೇಳಿದ್ದಾರೆ.

ಭಾರತದ ಕೆಲವು ಟ್ವೀಟ್ ವಿಷಯಗಳಲ್ಲಿ ನಿಖರವಾಗಿ ಏನಾಯಿತು ಎಂಬುದು ನನಗೆ ಗೊತ್ತಿಲ್ಲ. ಭಾರತದಲ್ಲಿ ಸಾಮಾಜಿಕ ಮಾಧ್ಯಮಗಳ ವಿಷಯಗಳ ಕುರಿತಾದ ನಿಯಮಗಳ ತುಂಬಾ ಕಟ್ಟುನಿಟ್ಟಾಗಿವೆ. ನಾವು ಆ ದೇಶದ ಕಾನೂನನ್ನು ಮೀರಿ ನಿಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ADVERTISEMENT

2002ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ನಡೆದಿದ್ದ ಗೋಧ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಬಿಬಿಸಿಯ 'ಇಂಡಿಯಾ ದಿ ಮೋದಿ ಕ್ವೆಶನ್' ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.