ಬೆಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಾಯಿಸಿ ನೆಟ್ಟಿಗರು ಟ್ವೀಟ್ ಅಭಿಯಾನ ನಡೆಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪುರಾತನ ಭಾಷೆಯಾಗಿರುವ ತುಳುವನ್ನು ಸರ್ಕಾರಗಳು ಕಡೆಗಣಿಸಿವೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಭಾಷೆಯಾಗಿರುವ ತುಳುವಿಗೆ ಇಲ್ಲಿಯವರೆಗೆ ಅಧಿಕೃತ ಸ್ಥಾನಮಾನ ಸಿಗಲಿಲ್ಲ. ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳದ ಅಧಿಕೃತ ಭಾಷೆಯಾಗಿ ಮಾಡಬೇಕು ಮತ್ತು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಟ್ವಿಟರ್‌ನಲ್ಲಿ #TuluTo8thSchedule #TuluOfficialinKA_KL ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.
ಇದನ್ನೂ ಓದಿ:
ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಸೇರಿಸಲು ಒತ್ತಾಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.