ಬೆಂಗಳೂರು: ಟ್ವಿಟರ್ ವೆಬ್ ಅಪ್ಲಿಕೇಶನ್ ಮತ್ತು ವೆಬ್ ಪೇಜ್ ತೆರೆದುಕೊಳ್ಳದೇ ಇರುವುದರಿಂದ ಬಳಕೆದಾರರು ಸಮಸ್ಯೆ ಎದುರಿಸಿದ್ದಾರೆ.
ಎಲಾನ್ ಮಸ್ಕ್ ಟ್ವಿಟರ್ ಅನ್ನು ಖರೀದಿಸಿದ ಬಳಿಕ ಕಂಪನಿಯಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದಾರೆ.
ಅದರ ಬೆನ್ನಲ್ಲೇ, ಶುಕ್ರವಾರ ಬೆಳಗ್ಗೆ ಟ್ವಿಟರ್ ಕೈಕೊಟ್ಟಿದ್ದು, ಬಳಕೆದಾರರಿಗೆ ವೆಬ್ ಮತ್ತು ಡೆಸ್ಕ್‌ಟಾಪ್ ಆವೃತ್ತಿ ಲಭ್ಯವಾಗುತ್ತಿಲ್ಲ.
ಸ್ಮಾರ್ಟ್‌ಫೋನ್ ಆ್ಯಪ್‌ನಲ್ಲಿ ಟ್ವಿಟರ್ ಕಾರ್ಯನಿರ್ವಹಿಸುತ್ತಿದೆ.
ಹೊಸ ಕಾರ್ಯತಂತ್ರದ ಭಾಗವಾಗಿ ಟ್ವಿಟರ್, ವೆರಿಫೈಡ್ ಖಾತೆಗಳಿಗೆ ಶುಲ್ಕ ವಿಧಿಸಲು ಮುಂದಾಗಿದೆ. ತಿಂಗಳ ಚಂದಾದಾರಿಕೆ ಶುಲ್ಕವನ್ನು ಟ್ವಿಟರ್ ಬಳಕೆದಾರರಿಗೆ ವಿಧಿಸಲಿದೆ.
ಜತೆಗೆ ಉದ್ಯೋಗ ಕಡಿತಕ್ಕೂ ಮುಂದಾಗಿದ್ದು, ಶುಕ್ರವಾರದಿಂದಲೇ ವಿವಿಧ ಹಂತಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಕಂಪನಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.