ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಏಮ್ಸ್) ವೆಬ್‌ಸೈಟ್ ಮೇಲೆ ಸೈಬರ್ ದಾಳಿ ಹಿಂದೆ ಚೀನಾ ಕೈವಾಡ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳ ಹೇಳಿಕೆಯನ್ನು ಸುದ್ದಿಸಂಸ್ಥೆ 'ಎಎನ್‌ಐ' ಉಲ್ಲೇಖ ಮಾಡಿದೆ.
ಏಮ್ಸ್ ಸರ್ವರ್ ದಾಳಿಯ ಮೂಲ ಚೀನಾದಿಂದ ಪತ್ತೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. 100 ಸರ್ವರ್‌ಗಳ ಪೈಕಿ (40 ಭೌತಿಕ, 60 ವರ್ಚುವಲ್) ಐದು ಭೌತಿಕ ಸರ್ವರ್‌ಗಳ ಮೇಲೆ ದಾಳಿ ನಡೆಸಲಾಗಿತ್ತು. ಐದೂ ಸರ್ವರ್‌ಗಳ ಡೇಟಾವನ್ನು ಯಶಸ್ವಿಯಾಗಿ ರಿಸ್ಟೋರ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.