ಬೆಂಗಳೂರು: ಟೆಸ್ಲಾ ಖ್ಯಾತಿಯ ಎಲೊನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಬ್ರಾಡ್‌ಬ್ಯಾಂಡ್ ಸೇವೆ ಶೀಘ್ರದಲ್ಲೇ ಜಾಗತಿಕವಾಗಿ ಬಳಕೆದಾರರಿಗೆ ಲಭ್ಯವಾಗಲಿದೆ.
ಸ್ಪೇಸ್ ಎಕ್ಸ್‌ಪ್ಲೋರೇಶನ್ ಟೆಕ್ನಾಲಜೀಸ್ ಕಾರ್ಪೊರೇಶನ್ ಈಗಾಗಲೇ 1,500ಕ್ಕೂ ಅಧಿಕ ಸ್ಟಾರ್‌ಲಿಂಕ್ ಸರಣಿಯ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿದೆ.
ಆಗಸ್ಟ್ ತಿಂಗಳಿನಲ್ಲಿ ಜಗತ್ತಿನ ವಿವಿಧ ಭಾಗಗಳಲ್ಲಿ ಸ್ಟಾರ್‌ಲಿಂಕ್ ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್ ಸೇವೆ ದೊರೆಯಲಿದೆ.
ಮಂಗಳವಾರ ನಡೆದ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಎಲೊನ್ ಮಸ್ಕ್, ಜಾಗತಿಕವಾಗಿ ಬ್ರಾಡ್‌ಬ್ಯಾಂಡ್ ಸೇವೆ ನೀಡಲು ಸಿದ್ಧತೆ ನಡೆದಿದೆ. ಉತ್ತಮ ಸೇವೆಯ ಜತೆಗೆ ಗರಿಷ್ಠ ಸಂಖ್ಯೆಯ ಬಳಕೆದಾರರನ್ನು ಹೊಂದುವ ಗುರಿ ಇದೆ. ಅದಕ್ಕಾಗಿ ಮತ್ತಷ್ಟು ಹೂಡಿಕೆ ಮಾಡಲಾಗುತ್ತದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.