ನವದೆಹಲಿ: ಸಾಕಷ್ಟು ಚರ್ಚೆಗಳ ಬಳಿಕ ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್‌ಇ) 12ನೇ ತರಗತಿಯ ಈ ವರ್ಷದ ಪರೀಕ್ಷೆಗಳನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯು ತೀವ್ರವಾಗಿ ವ್ಯಾಪಿಸಿರುವ ಹಿನ್ನೆಲೆಯಲ್ಲಿ ತಜ್ಞರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲು ತೀರ್ಮಾನಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಮಕ್ಕಳ ಆರೋಗ್ಯ ಕಾಪಾಡಲು ಹಾಗೂ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿ ಸ್ನೇಹಿ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದರು.
ಒಟ್ಟಿನಲ್ಲಿ ಕೇಂದ್ರ ಸರ್ಕಾರದ ನಿರ್ಧಾರವು ಮೈಕ್ರೋಬ್ಲಾಗಿಂಗ್ ಜಾಲತಾಣ ಟ್ವಿಟರ್‌ನಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ. ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಇಚ್ಛಿಸಿದರೆ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಪಾಲಿಂಗತೂ ವರದಾನವಾಗಿ ಪರಿಣಮಿಸಿದೆ.
ಇದು 'ಟಾಪರ್ಸ್' ಹಾಗೂ 'ಬ್ಯಾಕ್ ಬೆಂಚರ್' ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತೆ ಆಸಕ್ತಿದಾಯಿಕ ಮೀಮ್ಸ್ ಸೃಷ್ಟಿಯಾಗಲು ಕಾರಣವಾಗಿದೆ. ಕೆಲವು ಆಯ್ದ ಟ್ವೀಟ್‌ಗಳನ್ನು ಇಲ್ಲಿ ಕೊಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.