ವಯನಾಡು (ಕೇರಳ): ಕೇರಳದ ವಯನಾಡು ಜಿಲ್ಲೆಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲಾಗಿದೆ.
ಅಗ್ನಿಶಾಮಕದಳದಸಿಬ್ಬಂದಿಗಳುಹಾಗೂ ಸ್ಥಳೀಯರು ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ:ಬುರ್ಜ್ ಖಲೀಫಾದ ತುತ್ತ ತುದಿಯಲ್ಲಿ ಜಾಹೀರಾತು ಚಿತ್ರೀಕರಣ; ಅಸಲಿಯತ್ತು ಏನು?
ರಕ್ಷಣಾ ಕಾರ್ಯಾಚರಣೆಯ ವಿಡಿಯೊವನ್ನು ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
ಅವಘಡದ ಹಿಂದಿನ ನಿಖರ ಕಾರಣಗಳು ತಿಳಿದು ಬಂದಿಲ್ಲ. ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಇತ್ತು ಎನ್ನಲಾಗಿದೆ.
ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿಯನ್ನು ತಲುಪಿಸಿದರು. ಹಗ್ಗ ಹಾಗೂ ಬಲೆಯ ಸಹಾಯದಿಂದ ಮಹಿಳೆಯನ್ನು ಮೇಲಕ್ಕೆ ಎತ್ತಲಾಯಿತು.
ಮಹಿಳೆಗೆಗಂಭೀರವಾದಗಾಯವಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.