ನವದೆಹಲಿ: ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗುರುತಿಸಲು ಪ್ರತಿ ವರ್ಷ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.
1911ರಲ್ಲಿ ಮೊದಲ ಬಾರಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿನ ಮಹಿಳೆಯರ ಸಾಧನೆಗಳನ್ನು ಗುರುತಿಸುವುದು ಮತ್ತು ಮಹಿಳಾ ಸಮಾನತೆ, ಲಿಂಗ ತಾರತಮ್ಯ ಕುರಿತು ಅರಿವು ಮೂಡಿಸುವುದು ಈ ದಿನದ ವಿಶೇಷತೆ.
ಈ ಬಾರಿಯ ಅಂತರಾಷ್ಟ್ರೀಯ ಮಹಿಳಾ ದಿನದ ವಿಷಯ:‘ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ’
ಹವಾಮಾನ ಬಿಕ್ಕಟ್ಟಿನಷ್ಟೇ, ಲಿಂಗ ಸಮಾನತೆ ಎಂಬುದು 21ನೇ ಶತಮಾನದ ಅತಿದೊಡ್ಡ ಜಾಗತಿಕ ಸವಾಲುಗಳಲ್ಲಿ ಒಂದಾಗಿದೆ. ಪುರುಷರಿಗಿಂತ ಮಹಿಳೆಯರನ್ನು ಹೆಚ್ಚು ದುರ್ಬಲರಂತೆ ಕಾಣಲಾಗುತ್ತಿದೆ. ಮಹಿಳೆಯರು ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದು, ಬದಲಾವಣೆಯ ಪರಿಣಾಮಕ್ಕೆ ಒಳಗಾಗುತ್ತಾರೆ.
ಈ ನಡುವೆಯೂ ಹವಾಮಾನ ಬಿಕ್ಕಟ್ಟನ್ನು ತಗ್ಗಿಸುವ ನಿಟ್ಟಿನಲ್ಲಿ ಹೆಣ್ಣು ಮಕ್ಕಳು, ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಾರೆ. ಮಹಿಳೆಯರು ಮತ್ತು ಯುವತಿಯರು ಹೆಚ್ಚು ಪ್ರಭಾವಶಾಲಿ, ಶಕ್ತಿಯುತ ನಾಯಕಿಯರಾಗಿದ್ದಾರೆ. ಈ ಅಂತರರಾಷ್ಟ್ರೀಯ ಮಹಿಳಾ ದಿನದಂದು ‘ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ’ ಎಂದು ವಿಶ್ವಸಂಸ್ಥೆ ಪ್ರಕಟಣೆಯಲ್ಲಿ ಹೇಳಿದೆ.
ಅಂತರರಾಷ್ಟ್ರೀಯ ಮಹಿಳಾ ದಿನದ ಮಹತ್ವ
ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗುರುತಿಸಲು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಸಾರ್ವಜನಿಕ ಭಾಷಣ, ರ್‍ಯಾಲಿ, ಕಾರ್ಯಾಗಾರ ಮತ್ತು ವಿಚಾರಗೋಷ್ಠಿ, ಚರ್ಚೆಗಳು, ರಸಪ್ರಶ್ನೆ ಸ್ಪರ್ಧೆ ಮತ್ತು ಉಪನ್ಯಾಸಗಳನ್ನು ನಡೆಸುವ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.