ನಟ ಸಿದ್ಧಾರ್ಥ್–ನಟಿ ಅದಿತಿರಾವ್ ಹೈದರಿ ಮದುವೆಯ ಸಂಭ್ರಮದ ಕ್ಷಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 

ನಟ, ನಿರ್ಮಾಪಕ ಸಿದ್ಧಾರ್ಥ್ ಹಾಗೂ ನಟಿ ಅದಿತಿ ರಾವ್ ಹೈದರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

|

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ತೆಲಂಗಾಣದ ವಾನಪರ್ತಿಯ ಐತಿಹಾಸಿಕ ರಂಗಸ್ವಾಮಿ ದೇವಾಲಯದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ

|

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ಕುಟುಂಬ, ಆಪ್ತರ ಸಮ್ಮುಖದಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ.

|

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ಖ್ಯಾತ ಮಾಡೆಲ್ ಆಗಿಯೂ ಗುರುತಿಸಿಕೊಂಡಿರುವ ಹೈದರಾಬಾದ್ ಮೂಲದ ಅದಿತಿ ರಾವ್ ಹೈದರಿ ಅವರು ಇದುವರೆಗೆ ಹಿಂದಿ, ತಮಿಳು, ತೆಲುಗಿನಲ್ಲಿ ಮೂವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

|

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ನಿರ್ಮಾಪಕ, ನಿರ್ದೇಶಕ, ಹಿನ್ನೆಲೆ ಗಾಯಕ, ಕಥೆಗಾರ ಹೀಗೆ ಬಹುಮುಖ ಪ್ರತಿಭೆಯಾಗಿ ಭಾರತೀಯ ಚಿತ್ರರಂಗದಲ್ಲಿ ಹೆಸರು ಮಾಡಿರುವ ಸಿದ್ಧಾರ್ಥ್ 40 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

|

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ಮದುವೆ ಸಂಭ್ರಮದ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

|

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌

ನಟ ಹಾಗೂ ನಟಿಯ ದಾಂಪತ್ಯ ಜೀವನಕ್ಕೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

|

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ನಟ ಸಿದ್ಧಾರ್ಥ್ ಹಾಗೂ ನಟಿ ಅದಿತಿರಾವ್ ಹೈದರಿ ಜೋಡಿ

|

ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್‌