ರಾಜ್ಯ, ದೇಶ ಮತ್ತು ಅಂತರರಾಷ್ಟ್ರೀಯ ಸುದ್ದಿಗಳ ಸಂಕ್ಷಿಪ್ತ ವಿವರಣೆ
ನೈರುತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.
ಭಾರತೀಯ ರಿಸರ್ವ್ ಬ್ಯಾಂಕ್‌ನ(ಆರ್‌ಬಿಐ) ಹಣಕಾಸು ನೀತಿ ಸಮಿತಿಯು ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಸದ್ಯದ ರೆಪೊ ದರ ಶೇಕಡ 6.5ರಷ್ಟಿದೆ.
ಜಮ್ಮುವಿನ ಸಿಧ್ರಾದಲ್ಲಿ ನಿರ್ಮಾಣಗೊಂಡಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಉದ್ಘಾಟಿಸಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹತ್ತು ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದೆಹಲಿಯಿಂದ ಹೊರಡುವ ಕೆಲವು ಮಾರ್ಗಗಳಲ್ಲಿ ವಿಮಾನ ದರವನ್ನು ಶೇ 14 ರಿಂದ 61 ರಷ್ಟು ಕಡಿಮೆ ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.
ಒಂದು ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ 45 ವರ್ಷದ ಕಾಡಾನೆಯನ್ನು ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಸೆರೆ ಹಿಡಿದಿದ್ದಾರೆ.
ಬಡವರಿಗಾಗಾಗಿ ಕೈಗೆಟಕುವ ಬೆಲೆಗೆ ಲಭ್ಯವಾಗುವಂತೆ ನಿರ್ಮಿಸಲಾಗುತ್ತಿರುವ 76 ಮನೆಗಳಿರುವ ವಸತಿ ಸಮುಚ್ಚಯವನ್ನು ಉತ್ತರ ಪ್ರದೇಶ ಸರ್ಕಾರ ನಿರ್ಮಿಸಿದೆ. ಅಷ್ಟಕ್ಕೂ ಈ ಮನೆ ನಿರ್ಮಾಣಗೊಂಡಿರುವುದು ಇತ್ತೀಚೆಗೆ ಹತನಾದ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್‌ನಿಂದ ವಶಪಡಿಸಿಕೊಳ್ಳಲಾದ ಜಾಗದಲ್ಲಿ.
ವ್ಯಕ್ತಿಯೊಬ್ಬ ತನ್ನ ಸಹಜೀವನ ಸಂಗಾತಿ ಮಹಿಳೆಯನ್ನು ಕೊಂದು ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿರುವ ಪ್ರಕರಣ ಮಹಾರಾಷ್ಟ್ರದ ಥಾಣೆಯಲ್ಲಿ ಬಯಲಾಗಿದೆ.
ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ರಷ್ಯಾದ ಮಗದನ್ ಎಂಬಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಇದೀಗ ಎಂಜಿನ್ ದೋಷವನ್ನು ಸರಿಪಡಿಸಿದ ನಂತರ 232 ಪ್ರಯಾಣಿಕರೊಂದಿಗೆ ಸ್ಯಾನ್ ಫ್ರಾನ್ಸಿಸ್ಕೊಗೆ ಗುರುವಾರ ಹೊರಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.