Top 10 News | ದಿನದ ಪ್ರಮುಖ 10 ಸುದ್ದಿಗಳು

ಪ್ರಜಾವಾಣಿ ವಿಶೇಷ

ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿ ವಹಿಸಲಾಗಿದೆ.

ರಾಜ್ಯ ಸರ್ಕಾರವು ಆರು ತಿಂಗಳಿನಿಂದ ಈಚೆಗೆ ಮಾಡಿರುವ ಭೂ ಮಂಜೂರಾತಿ ಪ್ರಕರಣಗಳ ಕುರಿತು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಫಲಾನುಭವಿಯ ಪತಿ ಅಥವಾ ಪುತ್ರ ತೆರಿಗೆ ಪಾವತಿದಾರರಾಗಿದ್ದರೆ ಮಹಿಳೆಗೆ ’ಗೃಹಲಕ್ಷ್ಮಿ‘ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ.

‘ಬಿಪೊರ್‌ಜಾಯ್’ ಚಂಡಮಾರುತದ ಪರಿಣಾಮ ಮುಂದಿನ ಐದು ದಿನಗಳು ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರಿನ ಪರಪ್ಪನ ಅಗ್ರಹಾರದ ಸಾಯಿಶ್ರೀ ಬಡಾವಣೆಯಲ್ಲಿನ ವಸತಿ ಸಮುಚ್ಚಯದಲ್ಲಿ ಕಲುಷಿತ ನೀರು ಕುಡಿದು 132 ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

ಪಕ್ಷದ ವರಿಷ್ಠ ಶರದ್‌ ಪವಾರ್‌ಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ನ್ಯಾಷನಲಿಷ್ಟ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ಆರೋಪಿಸಿದೆ.

ಅತ್ಯಾಚಾರ ಸಂತ್ರಸ್ತ ಬಾಲಕಿಯ ಗರ್ಭಪಾತಕ್ಕೆ ಸಂಬಂಧಿಸಿದಂತೆ ವೈದ್ಯರ ಅಭಿಪ್ರಾಯ ಕೇಳುವ ವೇಳೆ, ‘ಬಾಲಕಿಯರಿಗೆ ಎಷ್ಟನೇ ವಯಸ್ಸಿಗೆ ಮದುವೆ ಮಾಡಲಾಗುತ್ತಿತ್ತು ಎಂಬುದನ್ನು ಮನುಸ್ಮೃತಿ ಓದಿ ತಿಳಿದುಕೊಳ್ಳಿ’ ಎಂದು ಗುಜರಾತ್ ಹೈಕೋರ್ಟ್‌ ಹೇಳಿದೆ.

ರಾಮನಗರ ಜಿಲ್ಲೆಯ 'ಬೆಂಗಳೂರು- ಮೈಸೂರು ಹೆದ್ದಾರಿಯ' ಶೇಷಗಿರಿಹಳ್ಳಿ ಟೋಲ್‌ನಲ್ಲಿ ಇತ್ತೀಚೆಗೆ ನಡೆದಿದ್ದ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಗಳನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಫೆಡರಲ್ ಕ್ರಿಮಿನಲ್ ಆರೋಪಗಳನ್ನು ಹೊರಿಸಿರುವ ನ್ಯಾಯಾಂಗ ಇಲಾಖೆಯು ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

2022–23ರ ಮುಂಗಾರು ಹಂಗಾಮಿನಲ್ಲಿ ತೊಗರಿ ಬೆಳೆಗೆ ಬಾಧಿಸಿದ ನೆಟೆ ರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು ₹74 ಕೋಟಿ ಬಿಡುಗಡೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.