Top 10 News | ಈ ದಿನದ ಪ್ರಮುಖ 10 ಸುದ್ದಿಗಳು, 27 ಜೂನ್‌ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಧಾರವಾಡದಿಂದ ಹೊರಟು ಮಂಗಳವಾರ ಮಧ್ಯಾಹ್ನ 1.57ಕ್ಕೆ ದಾವಣಗೆರೆ ರೈಲು ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ್ ರೈಲಿಗೆ ಜನಪ್ರತಿನಿಧಿಗಳು, ಪ್ರಯಾಣಿಕರು ಅದ್ಧೂರಿಯಾಗಿ ಸ್ವಾಗತಿಸಿದರು.

ಬಿಜೆಪಿಯವರಿಗೆ ಬಡಜನರ ಬಗ್ಗೆ ಕಾಳಜಿ ಇದ್ದರೆ, ಬೀದಿಗಿಳಿದು ಹೋರಾಟ ಮಾಡುವ ಬದಲು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ, ಅಕ್ಕಿ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು

ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಉಂಟಾಗಿದ್ದ ಆಮ್ಲಜನಕ ದುರಂತ ಪ್ರಕರಣದ ಮರು ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಧಾನಿಯಾಗಿ 9 ವರ್ಷ ಪೂರ್ಣಗೊಳಿಸಿದ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಧನ್ಯವಾದ ಅರ್ಪಿಸಿದರು. ‘ವಂದೇ ಭಾರತ್’ನ ಐದು ರೈಲುಗಳಿಗೆ ಮಂಗಳವಾರ ಇಲ್ಲಿ ಚಾಲನೆ ನೀಡಿದ ನಂತರ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿನ ಐದು ಹೊಸ ವಂದೇ ಭಾರತ್ ರೈಲುಗಳಿಗೆ ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಿಂದ ಮಂಗಳವಾರ ಒಂದೇ ಬಾರಿಗೆ ಚಾಲನೆ ನೀಡಿದರು.

ನಾಡಿನಲ್ಲಿ ಇಂದು (ಜೂ.27) ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ನಿಮಿತ್ತ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

‘ಏಕರೂಪ ನಾಗರಿಕ ಸಂಹಿತೆಯನ್ನು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದರೂ, ಮತ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ಪಕ್ಷಗಳು ಅದನ್ನು ವಿರೋಧಿಸುತ್ತಿರುವುದು ಆಘಾತಕಾರಿ. ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದರು.

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ. ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ನಡೆಯುವ ಈ ಟೂರ್ನಿಯು ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್‌ ಆಯೋಜನೆಗೊಳ್ಳಲಿದೆ.

ಹೆಚ್ಚಿನ ಪಿಂಚಣಿ ಬಯಸಿ ಅರ್ಜಿ ಸಲ್ಲಿಸಲು ನೀಡಿದ್ದ ಗಡುವನ್ನು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್‌ಒ) ಜುಲೈ 11ರವರೆಗೆ ವಿಸ್ತರಿಸಿದೆ. ಸಂಘಟನೆಯು ಗಡುವನ್ನು ಎರಡನೆಯ ಬಾರಿ ವಿಸ್ತರಿಸಿದಂತಾಗಿದೆ.

ಟೀಮ್ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಅವರು ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವುದನ್ನು ನೋಡಲು ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದೆ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.