ಪ್ರಜಾವಾಣಿ ವೆಬ್ ಡೆಸ್ಕ್
ಈ ಸರ್ಕಾರಕ್ಕೆ ಮೂರೇ ತಿಂಗಳು ಭವಿಷ್ಯ. ಮೂರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ. ಕರ್ನಾಟಕದ ಅಜಿತ್ ಪವಾರ್‌ಗೆ ಮೋಸವಾಗಿದೆ. ಈಗಿನ ಮುಖ್ಯಮಂತ್ರಿ ಜನರಿಗೆ ಮಾತ್ರವಲ್ಲದೇ ತನಗೂ ವಂಚಿಸಿದ್ದಾರೆ ಎಂದು ಆ ಪವಾರ್‌ಗೆ ಈ ಗೊತ್ತಾಗಿದೆ. ಹೀಗಾಗಿ ಸರ್ಕಾರಕ್ಕೆ ಭವಿಷ್ಯವಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸಂವಿಧಾನದ ಪಿತಾಮಹರ ಆಲೋಚನೆಯ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಅನುಷ್ಠಾನಕ್ಕೆ ತರಲು ಕಾಲ ಸನ್ನಿಹಿತವಾಗಿದೆ’ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಮಂಗಳವಾರ ಹೇಳಿದ್ದಾರೆ.
ಜಾತಿ ವ್ಯವಸ್ಥೆಯ ಮರುವರ್ಗೀಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿತು.
ವಿಧಾನ ಪರಿಷತ್ ನೂತನ ಸದಸ್ಯರಾದ ಜಗದೀಶ ಶೆಟ್ಟರ್, ಎನ್.ಎಸ್.ಭೋಸರಾಜು, ತಿಪ್ಪಣಪ್ಪ ಕಮಕನೂರ ಅವರು ಪ್ರಮಾಣವಚನ ಸ್ವೀಕರಿಸಿದರು.
‘ಉಕ್ರೇನ್ ವಿರುದ್ಧ ಸೇನಾ ಕಾರ್ಯಾಚರಣೆ ಕೈಗೊಂಡಿರುವ ಹಿನ್ನೆಲೆಯಲ್ಲಿ ತನ್ನ ಮೇಲೆ ಪಶ್ಚಿಮ ರಾಷ್ಟ್ರಗಳು ಹೇರುತ್ತಿರುವ ಒತ್ತಡ, ನಿರ್ಬಂಧಗಳಿಗೆ ರಷ್ಯಾ ತಕ್ಕ ಉತ್ತರ ನೀಡುವುದನ್ನು ಮುಂದುವರಿಸಲಿದೆ’ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಂಗಳವಾರ ಹೇಳಿದರು.
ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸು ನೆರವು ನೀಡುವುದನ್ನು ನಿಗ್ರಹಿಸಲು ನಿರ್ಣಾಯಕ ಕ್ರಮಕೈಗೊಳ್ಳುವ ಅಗತ್ಯವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.
ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿ ವೃಥಾ ಕಾಲಹರಣ ಮಾಡುವ ಬದಲಿಗೆ ವಿದ್ಯಾಭ್ಯಾಸದತ್ತ ಗಮನ ಕೇಂದ್ರೀಕರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕಾನೂನು ವಿದ್ಯಾರ್ಥಿಗೆ ಕಿವಿ ಮಾತು ಹೇಳಿದೆ.
‘ಪಾಕಿಸ್ತಾನ್ ತೆಹ್ರೀಕ್–ಇ– ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರ ವಿರುದ್ಧದ ತೋಶಖಾನಾ ಪ್ರಕರಣವು ಸ್ವೀಕಾರಾರ್ಹವಲ್ಲ’ ಎಂದು ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್‌ಸಿ) ಮಂಗಳವಾರ ಘೋಷಿಸಿದೆ.
ಹನಿ ನೀರಾವರಿ ಮೂಲಕ ಮಧ್ಯ ಕರ್ನಾಟಕ ಜಿಲ್ಲೆಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ಯನ್ನಾಗಿ ಘೋಷಿಸಲು ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಿದೆ.
ಬೆಂಗಳೂರು: ಅಲ್ಪ ಕಾಲದ ವಿರಾಮದ ಬಳಿಕ ಮತ್ತೆ ವಿಧಾನಸಭೆಯ ಕಲಾಪ ಆರಂಭಿಸಿದ ಸ್ಪೀಕರ್ ಯು.ಟಿ. ಖಾದರ್, ಗದ್ದಲದ ನಡುವೆಯೇ ಪ್ರಶ್ನೋತ್ತರ ಪೂರ್ಣಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.