ಪ್ರಜಾವಾಣಿ ವೆಬ್ ಡೆಸ್ಕ್
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ಪೂರ್ವಾಭ್ಯಾಸ ನಡೆಸುತ್ತಿದೆ
ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ವೈಮಾನಿಕ ಪ್ರದರ್ಶನವನ್ನು ನೀಡಲಿದೆ.
ವಾಯುಪಡೆಯ ಸೂರ್ಯಕಿರಣ್ ತಂಡದ ನೇತೃತ್ವದಲ್ಲಿ ವೈಮಾನಿಕ ಸಾಹಸ ಪ್ರದರ್ಶನ ನಡೆಯಲಿದೆ.
ವೈಮಾನಿಕ ಸಾಹಸ ಪ್ರದರ್ಶನ ನೀಡಲು ಪೂರ್ವಭ್ಯಾಸ ಕಸರತ್ತು ಭರದಿಂದ ಸಾಗುತ್ತಿದೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.
ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ನ.19) ನಡೆಯಲಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯಿಂದ ಪೂರ್ವಾಭ್ಯಾಸ
ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಲೋಹದ ಹಕ್ಕಿಗಳ ಕಲರವ
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಏಕದಿನ ವಿಶ್ವಕಪ್ ಫೈನಲ್ ಪಂದ್ಯವನ್ನು ನೋಡಲು ಆಗಮಿಸುವ ನಿರೀಕ್ಷೆಯಿದೆ.
ಆಸ್ಟ್ರೇಲಿಯಾದ ಪ್ರಧಾನಿ ಆ್ಯಂಟನಿ ಅಲ್ಬನೆಸ್ ಅವರಿಗೂ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕ್ರಿಕೆಟ್, ರಾಜಕೀಯ, ಬಾಲಿವುಡ್‌ನ ಸೇರಿದಂತೆ ಹಲವು ಗಣ್ಯರು ಈ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.
2 ವರ್ಷಗಳ ಬಳಿಕ ಫೈನಲ್ ತಲುಪಿರುವ ಭಾರತ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ.