ಹೈದರಾಬಾದ್: ಪದ್ಮಶ್ರೀ ಪುರಸ್ಕೃತ ಕೂಚಿಪುಡಿ ನೃತ್ಯಗಾರ್ತಿ ಶೋಭಾ ನಾಯ್ಡು (64) ಅವರು ಬುಧವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಅವರು ಕೊನೆ ಉಸಿರೆಳೆದಿದ್ದಾರೆ.

ನೃತ್ಯ ಸಂಯೋಜಕಿಯಾಗಿದ್ದ ಅವರು ವಿಪ್ರನಾರಾಯಣ, ಕಲ್ಯಾಣ ಶ್ರೀನಿವಾಸಂ ನೃತ್ಯರೂಪಕಗಳಲ್ಲಿ ಮುಖ್ಯ ಪಾತ್ರಧಾರಿಯಾಗಿದ್ದರು. ಸತ್ಯಭಾಮ, ದೇವದೇವಕಿ, ಪದ್ಮಾವತಿ, ಮೋಹಿನಿ, ಸಾಯಿಬಾಬಾ ಮತ್ತು ಪಾರ್ವತಿ ದೇವಿಯಂತಹ ವಿವಿಧ ಪಾತ್ರಗಳಿಗೆ ಅವರು ಜೀವ ತುಂಬಿದ್ದರು.

ಶೋಭಾ ನಾಯ್ಡು ಅವರುಭಾರತ ಮತ್ತು ವಿದೇಶದ ಹಲವಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ಅಮೆರಿಕ, ಬ್ರಿಟನ್ ಸೇರಿದಂತೆ ಇತರೆ ದೇಶಗಳಲ್ಲೂ ಹಲವು ನೃತ್ಯ ಪ್ರದರ್ಶನಗಳನ್ನು ನೀಡಿದ್ದಾರೆ.

ಕೇಂದ್ರ ಸರ್ಕಾರವುಶೋಭಾ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿದೆ. ಅಲ್ಲದೆ ಆಂಧ್ರಪ್ರದೇಶ ಸರ್ಕಾರ, ಹಲವು ಸಂಘಟನೆಗಳು ಅವರಿಗೆ ಹಲವು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.