ಲಂಡನ್: ಲೇಖಕಿ ಗೀತಾಂಜಲಿ ಶ್ರೀ ಅವರ ‘ಟೂಮ್ ಆಫ್ ಸ್ಯಾಂಡ್’ (Tomb of Sand) ಕಾದಂಬರಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ.

ಇದರೊಂದಿಗೆ ಹಿಂದಿ ಪುಸ್ತಕವೊಂದು ಬೂಕರ್ ಪ್ರಶಸ್ತಿಗೆ ಭಾಜನವಾಗಿದ್ದು, ಇದೇ ಮೊದಲು ಎಂಬ ಹೆಗ್ಗಳಿಕೆಗೆ‘ಟೂಮ್ ಆಫ್ ಸ್ಯಾಂಡ್’ ಪಾತ್ರವಾಗಿದೆ.

ಗುರುವಾರ ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಗೀತಾಂಜಲಿ ಶ್ರೀ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಪ್ರಶಸ್ತಿಯೂ 50,000 ಸಾವಿರ ಪೌಂಡ್ (ಸುಮಾರು ₹50 ಲಕ್ಷ) ಮೌಲ್ಯದ ಬಹುಮಾನವನ್ನು ಒಳಗೊಂಡಿದ್ದು, ಡೈಸಿ ರಾಕ್‌ವೆಲ್ ಅವರೊಂದಿಗೆ ಹಂಚಿಕೊಂಡಿದ್ದಾರೆ.

‘ನಾನು ಬೂಕರ್ ಪ್ರಶಸ್ತಿ ಬಗ್ಗೆ ಕನಸು ಕಂಡಿರಲಿಲ್ಲ. ಎಂದಿಗೂ ಯೋಚನೆಯನ್ನೂ ಮಾಡಿರಲಿಲ್ಲ. ಎಂತಹ ದೊಡ್ಡ ಮನ್ನಣೆ, ನಾನು ಆಶ್ಚರ್ಯಚಕಿತಳಾಗಿದ್ದೇನೆ. ಗೌರವ ಸಿಕ್ಕಿರುವುದಕ್ಕೆ ತುಂಬಾ ಸಂತೋಷವಾಗಿದೆ’ ಎಂದು ಗೀತಾಂಜಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಬೂಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ವಿಶ್ವದ 13 ಪುಸ್ತಕಗಳಲ್ಲಿ ‘ಟೂಮ್ ಆಫ್ ಸ್ಯಾಂಡ್’ ಒಂದಾಗಿತ್ತು. ಈ ಹಿಂದಿ ಕಾದಂಬರಿಯನ್ನು ಡೈಸಿ ರಾಕ್‌ವೆಲ್ ಅವರು ಇಂಗ್ಲಿಷ್‌ಗೆ ತರ್ಜುಮೆ ಮಾಡಿದ್ದರು.

ಈ ಪುಸ್ತಕ ₹50 ಲಕ್ಷ ಮೌಲ್ಯದ ಪ್ರಶಸ್ತಿ ವಿಭಾಗದಲ್ಲಿ ಬೂಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತ್ತು. ಇದೀಗ ಈ ಪುಸ್ತಕ ಬೂಕರ್ ಪ್ರಶಸ್ತಿಗೆ ಭಾಜನವಾಗಿದ್ದು, ಅದರಿಂದ ಬಂದ ಹಣವು ಲೇಖಕಿ ಮತ್ತು ಅನುವಾದಕಾರರ ಮಧ್ಯೆ ಹಂಚಿಕೆಯಾಗಿದೆ.

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಜನಿಸಿದ ಗೀತಾಂಜಲಿ ಅವರು ಮೂರು ಕಾದಂಬರಿ ಮತ್ತು ಹಲವು ಕಥೆಗಳನ್ನು ಬರೆದಿದ್ದಾರೆ. ಇದರಲ್ಲಿ ಹಲವು ಪುಸ್ತಕಗಳು ಇಂಗ್ಲಿಷ್, ಫ್ರೆಂಚ್, ಜರ್ಮನಿ ಹಾಗೂ ಕೊರಿಯಾ ಭಾಷೆಗಳಿಗೆ ಭಾಷಾಂತರಗೊಂಡಿವೆ.

‘ಟೂಮ್ ಆಫ್ ಸ್ಯಾಂಡ್’ ಕಾದಂಬರಿಯು ಉತ್ತರ ಭಾರತದ 80 ವರ್ಷದ ವೃದ್ಧೆ ತನ್ನ ಪತಿಯನ್ನು ಕಳೆದುಕೊಂಡ ಬಳಿಕ ತೀವ್ರ ಖಿನ್ನತೆಗೆ ಒಳಗಾಗುವುದು ಮತ್ತು ಅದರಿಂದ ಹೊರಬರುವುದು ಸೇರಿದಂತೆ ಹಲವು ವಿಭಿನ್ನ ಕಥಾಹಂದರವನ್ನು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.