ನವದೆಹಲಿ: ಜಿಮ್ನಿ ಕಾಂಪ್ಯಾಕ್ಟ್ ಎಸ್ಯುವಿ ವಾಹನಗಳ ರಫ್ತನ್ನು ಭಾರತದಿಂದ ಆರಂಭಿಸಲಾಗಿದೆ ಎಂದು ಮಾರುತಿ ಸುಜುಕಿ ಹೇಳಿದೆ. ಗುಜರಾತಿನ ಮುಂದ್ರಾ ಪೋರ್ಟ್ನಿಂದ 184 ವಾಹನಗಳು ಲ್ಯಾಟಿನ್ ಅಮೆರಿಕದ ಕೊಲಂಬಿಯಾ ಮತ್ತು ಪೆರು ದೇಶಗಳಿಗೆ ರವಾನೆಯಾಗುತ್ತಿವೆ. ಅಲ್ಲದೆ, ಮಧ್ಯಪ್ರಾಚ್ಯ ಮತ್ತು ಆಫ್ರಿಕಾದ ಮಾರುಕಟ್ಟೆಗಳಿಗೂ ರಫ್ತು ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ.

ಭಾರತವನ್ನು ಜಿಮ್ನಿ ಮಾದರಿ ವಾಹನಗಳ ಜಾಗತಿಕ ತಯಾರಿಕಾ ಕೇಂದ್ರವನ್ನಾಗಿ ಮಾಡುವ ಉದ್ದೇಶವನ್ನು ಮಾರುತಿ ಸುಜುಕಿ ಕಂಪನಿಯ ಮಾತೃಸಂಸ್ಥೆಯಾದ ಸುಜುಕಿ ಮೋಟರ್ ಕಾರ್ಪೊರೇಷನ್ ಹೊಂದಿದೆ.

ಗ್ರೇಟರ್ ನೊಯಿಡಾದಲ್ಲಿ 2020ರಲ್ಲಿ ನಡೆದ ವಾಹನ ಪ್ರದರ್ಶನ ಮೇಳದಲ್ಲಿ ಇದನ್ನು ಪ್ರದರ್ಶಿಸಲಾಗಿತ್ತು. 1.5 ಲೀಟರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 5 ಸ್ಪೀಡ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಮತ್ತು 4 ಸ್ಪೀಡ್ ಆಟೊಮ್ಯಾಟಿಕ್ ಟ್ರಾನ್ಸ್ಮಿಷನ್ ಆಯ್ಕೆಗಳನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.