ಬೆಂಗಳೂರು: ಟಾಟಾ ಮೋಟಾರ್ಸ್ ಕಂಪನಿಯು ಟಿಯಾಗೊದ ಹೊಸ ಟ್ರಿಮ್ ಅನ್ನು ಆಟೊಮೆಟೆಡ್ ಮ್ಯಾನುಯಲ್ ಟ್ರಾನ್ಸ್‌ಮಿಷನ್ (ಎಎಂಟಿ) ಆಯ್ಕೆಯೊಂದಿಗೆ ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಇದರ ಎಕ್ಸ್ ಷೋರೂಂ ಬೆಲೆ ₹ 5.99 ಲಕ್ಷದಿಂದ ಆರಂಭವಾಗಲಿದೆ ಎಂದು ಕಂಪನಿ ತಿಳಿಸಿದೆ.

ಈ ಮೂಲಕ ಕಂಪನಿಯ ಆಟೊಮ್ಯಾಟಿಕ್ ಶ್ರೇಣಿಯನ್ನು ಬಲಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

‘ಎಲ್ಲಾ ಪ್ರದೇಶಗಳಿಂದಲೂ ಟಿಯಾಗೊ ಹ್ಯಾಚ್‌ಬ್ಯಾಕ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತದಲ್ಲಿ ಆಟೊಮ್ಯಾಟಿಕ್ ಟ್ರಾನ್ಸ್‌ಮಿಷನ್ ವಿಭಾಗವು ಹೆಚ್ಚು ಬೇಡಿಕೆಯಲ್ಲಿದ್ದು ಟಿಯಾಗೊದ ಮಾರಾಟವು ಅದನ್ನು ಸಾಬೀತುಪಡಿಸಿದೆ’ ಎಂದು ಕಂಪನಿಯ ಪ್ರಯಾಣಿಕ ವಾಹನ ವ್ಯವಹಾರದ ಮಾರುಕಟ್ಟೆ ಮುಖ್ಯಸ್ಥ ವಿವೇಕ್ ಶ್ರೀವತ್ಸ ತಿಳಿಸಿದ್ದಾರೆ.

7 ಇಂಚಿನ ಇನ್ಫೊಟೇನ್‌ಮೆಂಟ್ ಟಚ್ ಸ್ಕ್ರೀನ್, 15 ಇಂಚಿನ ಅಲಾಯ್ ವೀಲ್ಸ್, ಸ್ವಯಂಚಾಲಿತ ಹವಾನಿಯಂತ್ರಣ ವ್ಯವಸ್ಥೆ ಮತ್ತು ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ನಂತಹ ವೈಶಿಷ್ಟ್ಯಗಳನ್ನು ಈ ಕಾರು ಹೊಂದಿದೆ ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.