ನವದೆಹಲಿ: ಓಲಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಕಂಪನಿಯು ತನ್ನ 1,441 ವಾಹನಗಳನ್ನು ಭಾನುವಾರ ಹಿಂಪಡೆದಿದೆ.

‘ಮಾರ್ಚ್ 26 ರಂದು ಪುಣೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ತನಿಖೆ ನಡೆಯುತ್ತಿದೆ. ಪ್ರಾಥಮಿಕ ತನಿಖೆ ಪ್ರಕಾರ ಇದೊಂದು ಪ್ರತ್ಯೇಕ ಸಮಸ್ಯೆ’ ಎಂದಷ್ಟೇ ಓಲಾ ಎಲೆಕ್ಟ್ರಿಕ್ ಹೇಳಿದೆ.

ಇದನ್ನೂ ಓದಿ:ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ: ಸಚಿವ ಗಡ್ಕರಿ ಎಚ್ಚರಿಕೆ

ಆದರೂ, ‘ಮುನ್ನೆಚ್ಚರಿಕಾ ಕ್ರಮವಾಗಿ ನಾವು ನಿರ್ದಿಷ್ಟ ಬ್ಯಾಚ್ನ ವಾಹನಗಳನ್ನು ಪರಿಶೀಲಿಸುತ್ತೇವೆ. ಆದ್ದರಿಂದ 1,441 ವಾಹನಗಳನ್ನು ಸ್ವಯಂಪ್ರೇರಿತವಾಗಿ ಹಿಂಪಡೆಯುತ್ತಿದ್ದೇವೆ’ ಎಂದು ಅದು ಹೇಳಿದೆ.

‘ಹಿಂಪಡೆದ ಸ್ಕೂಟರ್ಗಳನ್ನು ಎಂಜಿನಿಯರ್ಗಳು ಪರಿಶೀಲಿಸುತ್ತಾರೆ. ಬ್ಯಾಟರಿ ವ್ಯವಸ್ಥೆಗಳು, ಥರ್ಮಲ್ ಸಿಸ್ಟಮ್ಗಳು ಮತ್ತು ಸುರಕ್ಷತಾ ವ್ಯವಸ್ಥೆಗಳಲ್ಲಿನ ಸಮಸ್ಯೆಯನ್ನು ಪತ್ತೆ ಮಾಡಲಿದ್ದಾರೆ’ ಎಂದು ಸಂಸ್ಥೆ ತಿಳಿಸಿದೆ.

‘ಬ್ಯಾಟರಿ ವ್ಯವಸ್ಥೆಗಳು ಯುರೋಪಿನ ‘ಇಸಿಇ–136’ ಮಾನದಂಡಗಳಿಗೆ ಅನುಗುಣವಾಗಿವೆ. ಜತೆಗೆ, ಭಾರತದ ಇತ್ತೀಚಿನ ಪ್ರಸ್ತಾವಿತ ‘ಎಐಎಸ್–156’ಗೆ ಅನುಗುಣವಾಗಿ ಪರೀಕ್ಷಿಸಲ್ಪಟ್ಟಿದೆ’ ಎಂದು ಓಲಾ ಹೇಳಿದೆ.

ಇತ್ತೀಚೆಗೆ, ದೇಶದ ವಿವಿಧ ಭಾಗಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆಗಳು ಸಂಭವಿಸಿದ್ದು, ವಾಹನಗಳ ಸುರಕ್ಷತೆ ಬಗ್ಗೆ ಜನರಲ್ಲಿ ಆತಂಕ ಮನೆ ಮಾಡಿದೆ.

ಅಗ್ನಿ ಅವಘಡಗಳನ್ನು ಪರಿಶೀಲಿಸಲು ಸರ್ಕಾರ ಕೂಡ ಸಮಿತಿಯನ್ನು ರಚಿಸಿದೆ. ಕಂಪನಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದರೆ ದಂಡ ವಿಧಿಸುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.