ನವದೆಹಲಿ: 2024ರ ‘ಮಿಸ್ ಯೂನಿವರ್ಸ್ ಇಂಡಿಯಾ’ ಕಿರೀಟ ಗುಜರಾತ್‌ನ ರಿಯಾ ಸಿಂಘಾ ಅವರ ಮುಡಿಗೇರಿದ್ದು, ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಸ್ಪರ್ಧೆಯಲ್ಲಿ ವಿಜೇತರಾಗಿರುವ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐನೊಂದಿಗೆ ಮಾತನಾಡಿದ ರಿಯಾ, ‘ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ಗೆದ್ದಿದ್ದೇನೆ. ಈ ಮಟ್ಟಕ್ಕೆ ಬರಲು ತುಂಬಾ ಕಷ್ಟಪಟ್ಟಿದ್ದು, ಹಿಂದಿನ ಸ್ಪರ್ಧಿಗಳಿಂದ ಸ್ಫೂರ್ತಿ ಪಡೆದಿದ್ದೇನೆ’ ಎಂದು ಹೇಳಿದರು.

ನಟಿ ಮತ್ತು ಮಾಡೆಲ್ ಆಗಿರುವ ರಿಯಾ, ತಮ್ಮ 16ನೇ ವಯಸ್ಸಿನಲ್ಲಿಯೇ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ಮಿಸ್ ಟೀನ್ ಗುಜರಾತ್, ಮಿಸ್ ಟೀನ್ ಏಷ್ಯಾ, ಮಿಸ್ ಟೀನ್ ಅರ್ಥ್ ಹಲವು ಸೌಂದರ್ಯ ಸ್ಪರ್ಧೆಗಳಲ್ಲಿಯೂ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಜೈಪುರದಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆ ನಡೆದಿತ್ತು. ರಿಯಾ ಅವರಿಗೆ ನಟಿ ಊರ್ವಶಿ ರೌಟೆಲಾ ಅವರು ಕಿರೀಟವನ್ನು ತೊಡಿಸಿದ್ದಾರೆ.

ಕಳೆದ ವರ್ಷ ಶ್ವೇತಾ ಶಾರದ ಅವರು ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.