ಬೆಂಗಳೂರು: ಚಿತ್ರರಂಗದ ಬಹುದಿನಗಳ ಬೇಡಿಕೆಯಾಗಿರುವ ಫಿಲಂ ಸಿಟಿ ನಿರ್ಮಾಣಕ್ಕೆ ಸರ್ಕಾರ ಅನುದಾನ ಘೋಷಿಸಿದೆ. ಬೆಂಗಳೂರಿನಲ್ಲಿ ಸ್ಥಾಪಿಸುವುದಾಗಿ ತಿಳಿಸಿದೆ.

ಇದನ್ನೂ ಓದಿ:‘ರೋರಿಚ್ ಎಸ್ಟೇಟ್‌ನಲ್ಲಿ ಫಿಲಂ ಸಿಟಿ’

500 ಕೋಟಿ ವೆಚ್ಚದಲ್ಲಿ ಫಿಲಂ ಸಿಟಿ ನಿರ್ಮಿಸಲು ಸರ್ಕಾರ ನಿರ್ಧಿರಿಸಿದೆ. ಬೆಂಗಳೂರಿನಲ್ಲಿ ಫಿಲಂ ಸಿಟಿ ತಲೆ ಎತ್ತಲಿದೆ ಎಂದು ಹೇಳಲಾಗಿದೆಯಾದರೂ, ನಿರ್ದಿಷ್ಟವಾಗಿ ಎಲ್ಲಿ ಎಂಬುದು ಬಜೆಟ್‌ನಲ್ಲಿ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ:ಫಿಲಂ ಸಿಟಿ ನಿರ್ಮಿಸಲು ಸರ್ಕಾರಕ್ಕೆ ಆನೆ ಕಾರಿಡಾರ್ ಬೇಕಿತ್ತೇ?

ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ!

ಸಿದ್ದರಾಮಯ್ಯ ಸರ್ಕಾರ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸುವುದಾಗಿ ಹೇಳಿ ಅನುದಾನವನ್ನೂ ಘೋಷಿಸಿತ್ತು. ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮೈಸೂರಿನಿಂದ ರಾಮನಗರಕ್ಕೆ ಫಿಲಂ ಸಿಟಿಯನ್ನು ಸ್ಥಳಾಂತರ ಮಾಡಿತ್ತು. ಬಿ.ಎಸ್ ಯಡಿಯೂರಪ್ಪ ಸರ್ಕಾರ ರಾಮನಗರದಿಂದ ಬೆಂಗಳೂರು ಹೊರವಲಯದ ರೋರಿಚ್ ಎಸ್ಟೇಟ್‌ನಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಹೇಳಿತ್ತಾದರೂ, ಅದಕ್ಕೆ ರಾಜಕೀಯ ಮತ್ತು ಪರಿಸರ ವಲಯದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಅದರೊಂದಿಗೆ ಫಿಲಂ ಸಿಟಿ ನಿರ್ಮಾಣದ ವಿಚಾರದಲ್ಲಿ ಅನಿಶ್ಚಿತತೆ ಮನೆ ಮಾಡಿತ್ತು.

ಇನ್ನಷ್ಟು

ಫಿಲ್ಮ್ ಸಿಟಿ ಬೇಡ, ನಗರಕ್ಕೆ ಹೊಸ ‘ಶ್ವಾಸಕೋಶ’ ಬೇಕು

ಫಿಲಂಸಿಟಿ ಸ್ಥಳಾಂತರಿಸಿ ರಾಮನಗರದ ವಿರುದ್ಧ ಬಿಎಸ್ವೈ ದ್ವೇಷದ ರಾಜಕಾರಣ: ಎಚ್ಡಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.