ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023–24 ನೇ ಸಾಲಿನ ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯುದಯಕ್ಕಾಗಿ ₹39,121 ಕೋಟಿ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಇದರಡಿಯಲ್ಲಿ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ-ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣ ಹಾಗೂ ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟುಗಳನ್ನು ಮೀಸಲಿರಿಸಿ, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರ ಪ್ರವೇಶ ಕಲ್ಪಿಸಲಾಗುವುದು ಎಂದಿದ್ದಾರೆ.

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಮಂಜೂರು ಸೇರಿಂದತೆ ಇನ್ನಿತರ ಯೋಜನೆಗಳನ್ನಯ ಘೋಷಣೆ ಮಾಡಿದ್ದಾರೆ.
.ಬಜೆಟ್: ಅನ್ನ ಸುವಿಧಾ ಮೂಲಕ 80 ವರ್ಷ ಮೇಲ್ಪಟ್ಟವರಿಗೆ ಆಹಾರ ಧಾನ್ಯ ಹೋಂ ಡೆಲಿವರಿ.Budget: ಮೂರು ಕಾಲು ಗಂಟೆಯಲ್ಲಿ ₹3.71ಲಕ್ಷ ಕೋಟಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.