ಮುಂಬೈ: ಬೇಡಿಕೆಯನ್ನು ಹೆಚ್ಚಿಸಲು ಸರ್ಕಾರ ಗಮನ ನೀಡುವಂತೆ ಈ ಬಾರಿಯ ಬಜೆಟ್ ಪ್ರೇರಣೆ ನೀಡಬೇಕು ಎಂದು ಇಂಡಿಯಾ ರೇಟಿಂಗ್ಸ್ ಸಂಸ್ಥೆಯ ವರದಿ ಹೇಳಿದೆ. ಕೋವಿಡ್–19 ಸಾಂಕ್ರಾಮಿಕ ಅಪ್ಪಳಿಸಿದಾಗಿನಿಂದಲೂ ಉತ್ಪಾದನೆ ಮತ್ತು ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಗಮನ ನೀಡಲಾಗಿದೆ ಎಂದೂ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಉತ್ಪನ್ನಗಳು ಮತ್ತು ಸೇವೆಗಳಿಗೆ ಬೇಡಿಕೆ ಸೃಷ್ಟಿಸುವತ್ತ ಗಮನ ನೀಡಲು ಇದು ಸಕಾಲ. ಇಲ್ಲದಿದ್ದರೆ ಈಗ ಕಾಣುತ್ತಿರುವ ಚೇತರಿಕೆಯು ಚೈತನ್ಯ ಕಳೆದುಕೊಳ್ಳುತ್ತದೆ. ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಗಮನ ನೀಡಿದ್ದರಲ್ಲಿ ಯಾವ ತಪ್ಪೂ ಇಲ್ಲ. ಆದರೆ, ಉತ್ಪನ್ನಗಳು ಮತ್ತು ಸೇವೆಗಳಿಗೆ ಬೇಡಿಕೆ ಅಗತ್ಯ ಪ್ರಮಾಣದಲ್ಲಿ ಇಲ್ಲದಿದ್ದರೆ ಆರ್ಥಿಕ ಚೇತರಿಕೆಗೆ ಅಡ್ಡಿಯಾಗುತ್ತದೆ ಎಂದು ಸುನಿಲ್ ಕುಮಾರ್ ಸಿನ್ಹಾ ಅವರು ವರದಿಯಲ್ಲಿ ಹೇಳಿದ್ದಾರೆ.

ಸರ್ಕಾರ ಮತ್ತು ಆರ್‌ಬಿಐ ಕೈಗೊಂಡಿರುವ ಕ್ರಮಗಳ ಪರಿಣಾಮವಾಗಿ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳು ನಿವಾರಣೆ ಆದರೂ, ಸರಕು ಮತ್ತು ಸೇವೆಗಳಿಗೆ ಸರಿಯಾದ ಬೇಡಿಕೆ ಇಲ್ಲದಿರುವ ಕಾರಣ ಸಮಸ್ಯೆ ಸೃಷ್ಟಿಯಾಗಬಹುದು ಎಂದು ಸಿನ್ಹಾ ಅವರು ಎಚ್ಚರಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಸುವ ಮೂಲಸೌಕರ್ಯ ಯೋಜನೆಗಳ ಮೇಲೆ ಹೆಚ್ಚಿನ ಹೂಡಿಕೆ ಆಗಬೇಕು. ಬಡ ವರ್ಗಗಳಿಗೆ ಹಣಕಾಸಿನ ನೆರವು ನೀಡಬೇಕು. ನರೇಗಾ ಯೋಜನೆಗೆ ಇನ್ನಷ್ಟು ಅನುದಾನ ನೀಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.