ಮಂಗಳೂರು: ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರ ಈಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

ಗ್ಯಾರಂಟಿಗಳ ಜಾರಿಗೆ ₹ 57,910 ಕೋಟಿ ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ, ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದರೂ, ಬಜೆಟ್‌ನಲ್ಲಿ ಇದರ ವೆಚ್ಚದ ಉಲ್ಲೇಖವಿಲ್ಲ. ಒಟ್ಟಿನಲ್ಲಿ ಬಜೆಟ್ ಸುಳ್ಳು ಭರವಸೆಗಳ ಕಂತೆಯಾಗಿದೆ. ಸರ್ವರಿಗೂ ಸಮಪಾಲು ಹಾಗೂ ಸಮಬಾಳು ಸರ್ಕಾರದ ನೀತಿಯಾಗಿರಬೇಕು. ಆದರೆ, ಸಿದ್ದರಾಮಯ್ಯ ಅವರು ಬಜೆಟ್‌ನಲ್ಲೂ ಅಲ್ಪಸಂಖ್ಯಾತರ ತುಷ್ಟೀಕರಣವನ್ನು ಅನುಸರಿಸಿದ್ದಾರೆ. ಬಹುಸಂಖ್ಯಾತರ ಹಿತವನ್ನು ಈ ಬಜೆಟ್ ಕಡೆಗಣಿಸಿದೆ. ನೋಂದಣಿ ಮತ್ತು ಮುದ್ರಾಂಕ ದರ ಹೆಚ್ಚಳ, ವಾಹನಗಳ ತೆರಿಗೆ ಹೆಚ್ಚಳ ಭವಿಷ್ಯದಲ್ಲಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಮಾರಕವಾಗಿ ಪರಿಣಮಿಸಲಿದೆ ಎಂದು ನಳಿನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.